Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > KSRTC | ಶೀಘ್ರದಲ್ಲೇ 6,500 ಹುದ್ದೆ ಭರ್ತಿ ಪ್ರಕ್ರಿಯೆ: ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕ

KSRTC | ಶೀಘ್ರದಲ್ಲೇ 6,500 ಹುದ್ದೆ ಭರ್ತಿ ಪ್ರಕ್ರಿಯೆ: ಸಚಿವ ರಾಮಲಿಂಗಾರೆಡ್ಡಿ

Share
1 Min Read
SHARE

newsics.com

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳಲ್ಲಿ 9000 ಹುದ್ದೆಗಳ ನೇಮಕಾತಿಗೆ ಸರ್ಕಾರ ಅನುಮತಿ ನೀಡಿದ್ದು, ಈ ಪೈಕಿ 1883 ಚಾಲಕ ಹಾಗೂ ನಿರ್ವಾಹಕ ಮತ್ತು ತಾಂತ್ರಿಕ ಸಿಬ್ಬಂದಿಗೆ ನೇಮಕಾತಿ ಆದೇಶ ನೀಡಲಾಗಿದೆ. 6500 ಹುದ್ದೆಗಳ ನೇಮಕಾತಿಗೆ ಪ್ರಕ್ರಿಯೆ ಶೀಘ್ರದಲ್ಲೆ ಪೂರ್ಣಗೊಳಿಸಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಕೇಂದ್ರೀಯ ವಿಭಾಗದ ಘಟಕ – 2ರ ಆವರಣದಲ್ಲಿ ನಿಗಮದ 63ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಬುಧವಾರ ಆಯೋಜಿಸಲಾಗಿದ್ದ ವಿವಿಧ ಕಾರ್ಯಕ್ರಮಗಳಿಗೆ ಹಾಗೂ ನಿಗಮದಲ್ಲಿ ಇದೇ ಮೊದಲ ಬಾರಿ ಪುನಶ್ಚೇತನಗೊಳಿಸಿದ ಐರಾವತ ಕ್ಲಬ್ ಕ್ಲಾಸ್ ವಾಹನಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ನಿಗಮವು ಕಾರ್ಮಿಕರ ಕಲ್ಯಾಣಕ್ಕಾಗಿ ಹಲವಾರು ಯೋಜನೆಗಳನ್ನು ಹಮ್ಮಿಕೊಂಡಿದ್ದು ಇದರಿಂದ ಕಾರ್ಮಿಕರು ಸಂತೃಪ್ತಿಯಿಂದ ಕಾರ್ಯನಿರ್ವಹಿಸಲು ಸಹಕಾರಿಯಾಗಿರುವುದಾಗಿ ತಿಳಿಸಿದರು.

ನಾಲ್ಕು ವರ್ಷಗಳಿಂದ ಯಾವುದೇ ಅನುಕಂಪದ ಆಧಾರದಲ್ಲಿ ನೇಮಕಾತಿ ನಡೆದಿರುವುದಿಲ್ಲ. ಕಳೆದ 18 ತಿಂಗಳಲ್ಲಿ 1000 ಮೃತರ ಅವಲಂಬಿತರಿಗೆ ಅನುಕಂಪದ ಆಧಾರದ ಮೇಲೆ ನೌಕರಿಯನ್ನು ನೀಡಲಾಗಿದೆ. ಸರ್ಕಾರವು 5800 ನೂತನ ವಾಹನಗಳನ್ನು ಸೇರ್ಪಡೆ ಮಾಡಲು ಅನುಮತಿಸಿದ್ದು, ಇದುವರೆಗೆ 3417 ವಾಹನಗಳನ್ನು ಸೇರಿಸಲಾಗಿದೆ. ನಿಗಮವು ನೂತನವಾಗಿ ಜಾರಿಗೊಳಿಸಿದ ವಾಹನಗಳ ಪುನಶ್ಚೇತನ ಕಾರ್ಯವು ನೂತನ ಬಸ್ಸುಗಳನ್ನು ಸೇರ್ಪಡೆ ಮಾಡುವಲ್ಲಿ ಉಂಟಾಗಿರುವ ವಿಳಂಬದ ಕೊರತೆಯನ್ನು ತುಂಬಿದ್ದು, ಈ ಬಸ್ಸುಗಳು ನಾಲ್ಕು ಲಕ್ಷ ಕಿಮೀವರೆಗೆ ಕಾರ್ಯಾಚರಣೆ ಮಾಡಬಹುದಾಗಿರುತ್ತದೆ ಎಂದರು.

ಕೆಎಸ್ಆರ್‌ಟಿಸಿ ಅಧ್ಯಕ್ಷ, ಶಾಸಕ ಎಸ್.ಆರ್. ಶ್ರೀನಿವಾಸ್ ಮಾತನಾಡಿ, ಶಕ್ತಿ ಯೋಜನೆ ಜಾರಿಗೆ ಬರುವ ಮುನ್ನ ಪ್ರತಿದಿನ ನಾಲ್ಕು ನಿಗಮಗಳ ವ್ಯಾಪ್ತಿಯಲ್ಲಿ ಕಾರ್ಯಾಚರಣೆಗೊಳಿಸುತ್ತಿದ್ದ 158909 ಟ್ರಿಪ್‌ಗಳ ಪ್ರಮಾಣವು 172333 ಗೆ ಹೆಚ್ಚಳ, ಪ್ರತಿ ದಿನ 13424 ಹೆಚ್ಚುವರಿ ಟ್ರಿಪ್ಪುಗಳ ಕಾರ್ಯಾಚರಣೆ ಮಾಡಲಾಗಿದೆ ಎಂದರು.

ಉಪಾಧ್ಯಕ್ಷ ಮೊಹಮ್ಮದ್ ರಿಜ್ವಾನ್ ನವಾಬ್, ಎಂಡಿ ವಿ. ಅನ್ಬುಕುಮಾರ್, ಸಾರಿಗೆ ಇಲಾಖೆ ಕಾರ್ಯದರ್ಶಿ ಡಾ. ಎನ್.ವಿ‌.ಪ್ರಸಾದ್, ನಿರ್ದೇಶಕಿ
ಡಾ. ನಂದಿನಿದೇವಿ ಕೆ. ಮೊದಲಾದವರು ಉಪಸ್ಥಿತರಿದ್ದರು.

ಕಾವೇರಿ ತೀರ್ಥೋದ್ಭವ: ಭಕ್ತರಿಗೆ ದರ್ಶನ ನೀಡಿದ ತಾಯಿ, ಹರ್ಷೋದ್ಘಾರ

ಬೆಂಗಳೂರಿನ ಲಾಡ್ಜ್‌ನಲ್ಲಿ ತೀರ್ಥಹಳ್ಳಿ ತಹಸೀಲ್ದಾರ್ ಶವ ಪತ್ತೆ, ಸಾವಿಗೇನು ಕಾರಣ?

ಕೇಂದ್ರ ಸರ್ಕಾರಿ ನೌಕರರಿಗೆ, ಪಿಂಚಣಿದಾರರಿಗೆ ಖುಷಿ ಸುದ್ದಿ: ಶೇ.3 ತುಟ್ಟಿಭತ್ಯೆ ಹೆಚ್ಚಳ

TAGGED:500 posts to be filled soon: Minister Ramalingareddy6
Share This Article
Facebook Twitter Copy Link Print
Previous Article ತಿಂಗಳಲ್ಲಿ ಕರ್ನಾಟಕದ ಗೆಹ್ಲೋಟ್ ಸೇರಿ ಹಲವು ರಾಜ್ಯಪಾಲರ ಬದಲಾವಣೆ
Next Article ಉಪ ಚುನಾವಣೆ ಗೆಲ್ಲಲು ಕಾಂಗ್ರೆಸ್ ಕಸರತ್ತು; ಸಿಎಂ, ಡಿಸಿಎಂಗೆ ಟಾಸ್ಕ್ ಕೊಟ್ಟ ವೇಣುಗೋಪಾಲ್

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?