newsics.com
ಲಕ್ನೋ: ಉತ್ತರ ಪ್ರದೇಶದ ಬಹ್ರೈಚ್‌ನಲ್ಲಿ ದುರ್ಗಾ ಪೂಜೆ ವೇಳೆ ನಡೆದಿದ್ದ ಹಿಂಸಾಚಾರದ ಪ್ರಮುಖ ಆರೋಪಿಯನ್ನು ಉತ್ತರ ಪ್ರದೇಶದ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಸರ್ಫರಾಜ್ ಎಂದು ಗುರುತಿಸಲಾಗಿದ್ದು, ಆತನನ್ನು ನೇಪಾಳ ಗಡಿಯಲ್ಲಿ ಬಂಧಿಸಲಾಗಿದೆ. ಬಂಧನದ ವೇಳೆ ಆತ ಪರಾರಿಯಾಗಲು ಯತ್ನಿಸಿದ್ದು ಪೊಲೀಸರು ಗುಂಡೇಟು ನೀಡಿದ್ದಾರೆ. ಪೊಲೀಸರು ನಡೆಸಿದ ಎನ್‌ಕೌಂಟರ್‌ನಲ್ಲಿ ಸರ್ಫರಾಜ್ ಮತ್ತು ಇನ್ನೋರ್ವ ಆರೋಪಿ ತಾಲಿಬ್ ಗಾಯಗೊಂಡಿದ್ದಾರೆ. ಆರೋಪಿಗಳಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಅ.13ರ ಸಂಜೆ ಉತ್ತರಪ್ರದೇಶದ ಮನ್ಸೂರ್ ಗ್ರಾಮದ ಮಹರಾಜ್‌ಗಂಜ್ ಪ್ರದೇಶದಲ್ಲಿ ದುರ್ಗಾದೇವಿ ವಿಗ್ರಹ ವಿಸರ್ಜನಾ ಮೆರವಣಿಗೆಯಲ್ಲಿ ಧ್ವನಿವರ್ಧಕ ಬಳಕೆ ವಿಚಾರವಾಗಿ ಎರಡು ಗುಂಪುಗಳ ನಡುವೆ ಕೋಮು ಸಂಘರ್ಷ ನಡೆದಿತ್ತು. ಘಟನೆಯಲ್ಲಿ ಓರ್ವ ಮೃತಪಟ್ಟಿದ್ದ. ಬಳಿಕ ಹಲವು ಮನೆಗಳಿಗೆ ಬೆಂಕಿ ಹಚ್ಚಲಾಗಿತ್ತು. ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದರು. ಗಲಭೆಗೆ ಸಂಬಂಧಿಸಿದಂತೆ 30 ಜನರನ್ನು ವಶಕ್ಕೆ ಪಡೆಯಲಾಗಿತ್ತು.