newsics.com
ಬೆಂಗಳೂರು: ಚನ್ನಪಟ್ಟಣ, ಶಿಗ್ಗಾಂವ್ ಮತ್ತು ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ 13 ರಂದು ನಡೆಯಲಿದೆ.
ಈ ಹಿನ್ನೆಲೆ ಉಪಚುನಾವಣೆಯ ಕಾರ್ಯತಂತ್ರಗಳ ಕುರಿತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರೊಂದಿಗೆ ಚರ್ಚಿಸಿದರು.
ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಗಳ ಘೋಷಣೆ ನಂತರ ತಮ್ಮ ಪಕ್ಷದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲು ಕಾಂಗ್ರೆಸ್ ನಾಯಕರು ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇದೇ ವೇಳೆ ಸಂಭಾವ್ಯ ಅಭ್ಯರ್ಥಿಗಳು ಮತ್ತು ಸಂಬಂಧಪಟ್ಟ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರೊಂದಿಗೆ ಮೂವರು ನಾಯಕರು ವೀಡಿಯೊ ಸಭೆ ನಡೆಸಿದರು.