ಬೆಂಗಳೂರಿನ ಲಾಡ್ಜ್‌ನಲ್ಲಿ ತೀರ್ಥಹಳ್ಳಿ ತಹಸೀಲ್ದಾರ್ ಶವ ಪತ್ತೆ, ಸಾವಿಗೇನು ಕಾರಣ?

newsics.com ಬೆಂಗಳೂರು: ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಹಸೀಲ್ದಾರ್ ಜಿ.ಬಿ. ಜಕ್ಕನಗೌಡರ್ (54) ಅವರ ಮೃತದೇಹವು ನಗರದ ಲಾಡ್ಜ್‌ವೊಂದರ ಕೊಠಡಿಯಲ್ಲಿ ಪತ್ತೆಯಾಗಿದ್ದು, ಹೃದಯಾಘಾತದಿಂದ ಮೃತಪಟ್ಟಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಉಪ್ಪಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ವೈಭವ್ ಲಾಡ್ಜ್‌ನ ಕೊಠಡಿಯಲ್ಲಿ ಬುಧವಾರ ರಾತ್ರಿ ಜಕ್ಕನಗೌಡರ್ ‌ಮೃತದೇಹ ಪತ್ತೆಯಾಗಿದೆ. ಜಕ್ಕನಗೌಡರ್ ಮೂಲತಃ ಗದಗ ಜಿಲ್ಲೆಯವರಾಗಿದ್ದು, ಕಳೆದೊಂದು ವರ್ಷದಿಂದ ತೀರ್ಥಹಳ್ಳಿ ತಹಶಿಲ್ದಾರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಕೋರ್ಟ್ ಕೆಲಸದ ನಿಮಿತ್ತ ಬೆಂಗಳೂರಿಗೆ ಬಂದಿದ್ದ ಅವರು ವೈಭವ್ ಲಾಡ್ಜ್‌ನಲ್ಲಿ ವಾಸ್ತವ್ಯ ಹೂಡಿದ್ದರು. ಮಂಗಳವಾರ ಸಂಜೆಯಿಂದಲೇ ಯಾರ … Continue reading ಬೆಂಗಳೂರಿನ ಲಾಡ್ಜ್‌ನಲ್ಲಿ ತೀರ್ಥಹಳ್ಳಿ ತಹಸೀಲ್ದಾರ್ ಶವ ಪತ್ತೆ, ಸಾವಿಗೇನು ಕಾರಣ?