newsics.com
ಪಂಚಕುಲ : ಸತತ ಎರಡನೇ ಬಾರಿಗೆ ಹರಿಯಾಣ ಸಿಎಂ ಆಗಿ ನಯಾಬ್ ಸಿಂಗ್ ಸೈನಿ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಹರಿಯಾಣದ ಪಂಚಕುಲದಲ್ಲಿ ಕಾರ್ಯಕ್ರಮ ನಡೆದಿದ್ದು, ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಯುಪಿ ಸಿಎಂ ಯೋಗಿ ಆದಿತ್ಯನಾಥ್ ಮತ್ತು ಇತರ ಸಿಎಂಗಳು, ಉಪ ಮುಖ್ಯಮಂತ್ರಿಗಳು, ಕೇಂದ್ರ ಸಚಿವರು, ಎನ್‌ಡಿಎ ನಾಯಕರು ಪ್ರಮಾಣ ವಚನ ಉಪಸ್ಥಿತರಿದ್ದರು.