newsics.com
ಕಲಬುರಗಿ: ಬೈಕ್, ಕಾರು ಹಾಗೂ ಲಾರಿ ನಡುವೆ ಭೀಕರವಾದ ಸರಣಿ ಅಪಘಾತ ಸಂಭವಿಸಿ ಸ್ಥಳದಲ್ಲೇ ನಾಲ್ವರು ಮೃತಪಟ್ಟಿರುವ ಘಟನೆ ಕಲಬುರಗಿಯ ಹಸನಾಪುರ ಬಳಿ ನಡೆದಿದೆ.
ರಾಘವೇಂದ್ರ (35), ಮುಜಾಹಿದ್ (30), ಹುಸೇನ್ ಬಿ (45) ಮೌಲಾಬಿ (50) ಮೃತ ದುರ್ದೈವಿಗಳು ಎಂದು ತಿಳಿದು ಬಂದಿದೆ.ಗಾಯಾಳುಗಳನ್ನು ಚಿಕಿತ್ಸೆಗಾಗಿ ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಿಂಧಗಿಯಿಂದ ಚಿತ್ತಾಪುರದ ಕಡೆಗೆ ಹೊರಟಿದ್ದ ಲಾರಿಗೆ ಬೈಕ್ ಡಿಕ್ಕಿ ಹೊಡೆದಿದೆ. ಈ ವೇಳೆ ವೇಗವಾಗಿ ಬಂದ ಕಾರು, ಲಾರಿಗೆ ಡಿಕ್ಕಿ ಹೊಡೆದ ಹಿನ್ನಲೆ ಕಾರಿನಲ್ಲಿದ್ದ ಮೂವರು ಸಾವನ್ನಪ್ಪಿದ್ದಾರೆ.ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.