newsics.com
ನವದೆಹಲಿ: ಕಜಾನ್‌ನಲ್ಲಿ ನಡೆಯಲಿರುವ ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ಮೋದಿ ಮುಂದಿನ ವಾರ ರಷ್ಯಾಕ್ಕೆ ಭೇಟಿ ನೀಡಲಿದ್ದಾರೆ.
ಕಜಾನ್‌ನಲ್ಲಿ ಅ.22, 23 ರಂದು 16ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಆಹ್ವಾನದ ಮೇರೆಗೆ ಪ್ರಧಾನಿ ನರೇಂದ್ರ ಮೋದಿ ರಷ್ಯಾಕ್ಕೆ ಭೇಟಿ ನೀಡಲಿದ್ದಾರೆ. ಬ್ರಿಕ್ಸ್ ಶೃಂಗಸಭೆಯು ರಷ್ಯಾದ ಅಧ್ಯಕ್ಷತೆಯಲ್ಲಿ ನಡೆಯುತ್ತಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ (ಎಂಇಎ) ತಿಳಿಸಿದೆ.
‘ಜಾಗತಿಕ ಅಭಿವೃದ್ಧಿ ಮತ್ತು ಭದ್ರತೆಗಾಗಿ ಬಹುಪಕ್ಷೀಯತೆಯನ್ನು ಬಲಪಡಿಸುವುದು’ ಎಂಬ ವಿಷಯದ ಶೃಂಗಸಭೆಯು ಪ್ರಮುಖ ಜಾಗತಿಕ ಸಮಸ್ಯೆಗಳ ಬಗ್ಗೆ ಚರ್ಚಿಸಲು ನಾಯಕರಿಗೆ ಪ್ರಮುಖ ವೇದಿಕೆಯನ್ನು ಒದಗಿಸುತ್ತದೆ ಎಂದು MEA ಹೇಳಿದೆ.