newsics.com
ಬೆಂಗಳೂರು : ಬೀದಿ ನಾಯಿಗಳಿಗೆ ಆಹಾರ ನೀಡುವ ಯೋಜನೆ ‘ಕುಕುರ್ ತಿಹಾರ್’ಗೆ ಬಿಬಿಎಂಪಿ ಗುರುವಾರ ಪ್ರಾಯೋಗಿಕವಾಗಿ ಚಾಲನೆ ನೀಡಿದೆ.
ಬಿಬಿಎಂಪಿಯ ಪಶುಸಂಗೋಪನಾ ಇಲಾಖೆ ವತಿಯಿಂದ ಎಲ್ಲಾ ವಲಯಗಳ ಆಯ್ದ ಸ್ಥಳಗಳಲ್ಲಿ ಗುರುವಾರ ಶ್ವಾನ ಮಹೋತ್ಸವ (ಕುಕುರ್ ತಿಹಾರ್) ಆಚರಿಸಲಾಗಿದ್ದು, ಪಾಲಿಕೆ ಕೇಂದ್ರ ಕಛೇರಿಯ ಡಾ. ರಾಜ್ ಕುಮಾರ್ ಗಾಜಿನ ಮನೆಯ ಬಳಿ ಚಾಲನೆ ನೀಡಿದೆ.
ಪ್ರತಿನಿತ್ಯ ಬೀದಿ ನಾಯಿಗಳಿಗೆ ಆಹಾರ ನೀಡಲಾಗುವುದು. ಸ್ಥಳದಲ್ಲಿ ಬೌಲ್, ನೀರು ಹಾಗೂ ಆಹಾರ ನೀಡುವ ಸ್ಥಳ ಎಂಬ ನಾಮಫಲಕದ ವ್ಯವಸ್ಥೆ ಮಾಡಲಾಗಿರುತ್ತದೆ. ಒಂದು ತಿಂಗಳ ಕಾಲ ಇದನ್ನು ಪ್ರಾಯೋಗಿಕವಾಗಿ ಪರಿಶೀಲಿಸಲಾಗುವುದು.