Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕಾಲೇಜುಗಳಿಗೆ ಬಾಂಬ್ ಬೆದರಿಕೆ ಕಳುಹಿಸುತ್ತಿದ್ದ ಆರೋಪಿ ಅರೆಸ್ಟ್
ಕರ್ನಾಟಕಪ್ರಮುಖ

ಕಾಲೇಜುಗಳಿಗೆ ಬಾಂಬ್ ಬೆದರಿಕೆ ಕಳುಹಿಸುತ್ತಿದ್ದ ಆರೋಪಿ ಅರೆಸ್ಟ್

Share
1 Min Read
SHARE

newsics.com

ಬೆಂಗಳೂರು: ಕೆಲವು ದಿನಗಳ ಹಿಂದೆ ಮೂರು ಇಂಜಿನಿಯರಿಂಗ್ ಕಾಲೇಜುಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಕಳುಹಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಆರೋಪಿಯನ್ನು ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಮೂಲದ ದೀಪಾಂಜನ್ ಮಿತ್ರಾ (48) ಎಂದು ಗುರ್ತಿಸಲಾಗಿದೆ. ಅ.4ರಂದು ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಹೈಡ್ರೋಜನ್ ಆಧಾರಿತ ಸುಧಾರಿಕ ಸ್ಫೋಟಕ ಸಾಧನ (ಐಇಡಿ) ಇರಿಸಿರುವುದಾಗಿ ಬೆದರಿಕೆ ಇ-ಮೇಲ್ ಬಂದಿತ್ತು. ಈ ಸಂಬಂಧ ವಿಶ್ವೇಶ್ವರಪುರ ಮತ್ತು ಹನುಮಂತನಗರ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ.

ತಾಂತ್ರಿಕ ತನಿಖೆಗಳು ಮತ್ತು ಇ-ಮೇಲ್‌ಗಳ ಐಪಿ ವಿಳಾಸದ ಆಧಾರದ ಮೇಲೆ ಆರೋಪಿಯನ್ನು ಡಾರ್ಜಿಲಿಂಗ್‌ನಲ್ಲಿ ಪತ್ತೆ ಹಚ್ಚಲಾಗಿದ್ದು, ಈತನ ವಿರುದ್ಧ ಪಶ್ಚಿಮ ಬಂಗಾಳದಲ್ಲಿ ಇದೇ ರೀತಿಯ 10 ಪ್ರಕರಣಗಳು ದಾಖಲಾಗಿವೆ ಎಂದು ತಿಳಿದುಬಂದಿದೆ.

ಆರೋಪಿ ಬಿಕಾಂ ಪದವೀಧರನಾಗಿದ್ದು, ಈಹಿಂದೆ ನಗರದ ವಿವಿಧ ಶಾಲಾ-ಕಾಲೇಜುಗಳಿಗೆ ಬಾಂಬ ಬೆದರಿಕೆ ಇ-ಮೇಲ್ ಸಂದೇಶ ಕಳುಹಿಸಿರುವ ಸಂಬಂಧ ವಿವಿಧ ಠಾಣೆಗಳಲ್ಲಿ ಪ್ರಕರಣ ದಾಖಲಾಗಿವೆ. ಈ ಪ್ರಕರಣಗಳಲ್ಲಿ ಆರೋಪಿಯ ಪಾತ್ರವಿರುವ ಸಾಧ್ಯತೆಯಿದೆ. ಹೆಚ್ಚಿನ ವಿಚಾರಣೆ ಬಳಿಕ ಮತ್ತಷ್ಟು ಮಾಹಿತಿ ಲಭ್ಯವಾಗಲಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

TAGGED:Accused of sending bomb threats to colleges arrested
Share This Article
Facebook Twitter Copy Link Print
Previous Article ನಿಜ್ಜರ್ ಹತ್ಯೆ ಪ್ರಕರಣ: ರಷ್ಯಾಗೆ ಭಾರತ ಹೋಲಿಸಿದ ಕೆನಡಾ
Next Article ಇ.ಡಿ ಅಧಿಕಾರಿಗಳಿಗೆ ಶಾಕ್; ಮುಡಾದಲ್ಲಿನ 1992ರ ಪ್ರಮುಖ ದಾಖಲೆಗಳು ನಾಪತ್ತೆ!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?