newsics.com
ಟೊರೊಂಟೊ: 2023ರಲ್ಲಿ ನಡೆದ ಹರ್ದೀಪ್ ಸಿಂಗ್ ನಿಜ್ಜಾರ್‌ನ ಕೊಲೆ ಪ್ರಕರಣ ಬಳಿಕ ಭಾರತ ಹಾಗೂ ಕೆನಡಾ ನಡುವಿನ ರಾಜತಾಂತ್ರಿಕ ಸಂಘರ್ಷ ತಾರಕಕ್ಕೇರಿದೆ.
ಕೆನಡಿಯನ್ನರ ಜೀವನವನ್ನು ಅಪಾಯಕ್ಕೆ ಸಿಲುಕಿಸುವ ಯಾವುದೇ ರಾಜತಾಂತ್ರಿಕರನ್ನು ಸರ್ಕಾರ ಸಹಿಸುವುದಿಲ್ಲ ಎಂದು ಕೆನಡಾ ಹೇಳಿದೆ. ಈ ಮೂಲಕ ಭಾರತವನ್ನು ರಷ್ಯಾಗೆ ಹೋಲಿಕೆ ಮಾಡಿದೆ.
ಒಟ್ಟಾವಾದಲ್ಲಿರುವ ಭಾರತೀಯ ಹೈಕಮಿಷನರ್ ಸಿಖ್ ನಿಜ್ಜರ್ ಹತ್ಯೆಯಲ್ಲಿ ಭಾಗಿಯಾಗಿದ್ದಾರೆ ಎಂಬುದು ಗೊತ್ತಾದ ಬಳಿಕ ಭಾರತೀಯ ರಾಜತಾಂತ್ರಿಕರಿಗೆ ಸ್ಪಷ್ಟವಾಗಿ ಸೂಚನೆ ನೀಡಲಾಗಿದೆ ಎಂದು ಕೆನಡಾದ ವಿದೇಶಾಂಗ ವ್ಯವಹಾರಗಳ ಸಚಿವೆ ಮೆಲಾನಿ ಜೋಲಿ ಹೇಳಿದ್ದಾರೆ.
ಅಲ್ಲದೆ, ವಿಯೆನ್ನಾ ಒಪ್ಪಂದವನ್ನು ಉಲ್ಲಂಘಿಸುವ ಅಥವಾ ಕೆನಡಿಯನ್ನರ ಜೀವನವನ್ನು ಅಪಾಯಕ್ಕೆ ಸಿಲುಕಿಸುವ ಯಾವುದೇ ರಾಜತಾಂತ್ರಿಕರನ್ನು ಸರ್ಕಾರ ಸಹಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.