newsics.com
ಬೆಂಗಳೂರು: ಹಿರಿಯ ರಾಜಕಾರಣಿ ಎಸ್ಎಮ್ ಕೃಷ್ಣ ವಯೋಸಹಜ ಅನಾರೋಗ್ಯದಿಂದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಂದು ಮಣಿಪಾಲ್ ಆಸ್ಪತ್ರೆಗೆ ಡಿಸಿಎಂ ಡಿಕೆ ಶಿವಕುಮಾರ್ ಭೇಟಿ ನೀಡಿ ಎಸ್ಎಂ ಕೃಷ್ಣ ಅವರ ಆರೋಗ್ಯ ವಿಚಾರಿಸಿದರು.
ಹಿರಿಯ ರಾಜಕಾರಣಿ ಎಸ್ಎಮ್ ಕೃಷ್ಣ ಅವರು ಈ ಹಿಂದೆ ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಅವರ ಆರೋಗ್ಯದಲ್ಲಿ ಮತ್ತೆ ಏರುಪೇರಾಗಿದ್ದು, ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.
ಡಾ. ಸತ್ಯನಾರಾಯಣ ಹಾಗೂ ಸನಿಲ್ ಕಾರಂತ್ ನೇತೃತ್ವದಲ್ಲಿ 92 ವರ್ಷದ ಎಸ್ಎಮ್ ಕೃಷ್ಣ ಅವರಿಗೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಚಿಕಿತ್ಸೆ ಮುಂದುವರೆದಿದೆ.