newsics.com
ಬೆಂಗಳೂರು : ಬಿಡುವು ಕೊಡದೇ ಸುರಿಯುತ್ತಿರುವ ಮಳೆಗೆ ಸಿಟಿ ಮಂದಿ ಹೈರಾಣಾಗಿದ್ದಾರೆ. ಬೆಂಗಳೂರಿನಲ್ಲಿ 22 ದಿನ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮೂನ್ಸುಚನೆ ನೀಡಿದೆ.
ಮನೆಯಿಂದ ಹೊರಗೆ ಹೆಜ್ಜೆ ಇಡಲು ಆಗದಂತೆ ರಚ್ಚೆ ಹಿಡಿದಿದೆ. ಹಿಂಗಾರು ಮಳೆ ರಾಜ್ಯದಲ್ಲಿ ಹಲವು ಅವಾಂತರ ಸೃಷ್ಟಿಸಿದೆ. ಈ ಮಧ್ಯೆ ಕರ್ನಾಟಕದಲ್ಲಿ ಮುಂದಿನ ಐದು ದಿನ ಮಳೆಯಾಗಲಿದ್ದು, ಬೆಂಗಳೂರಿನಲ್ಲಿ 22ರ ವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮೂನ್ಸುಚನೆ ನೀಡಿದೆ.
ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಹಾವೇರಿ, ಬಾಗಲಕೋಟೆ, ಗದಗ, ಕೊಪ್ಪಳ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಹಾಗೂ ರಾಮನಗರ ಜಿಲ್ಲೆಗಳ ಹಲವೆಡೆ ಭಾರಿ ಮಳೆ ಸಾಧ್ಯತೆ ಇದ್ದು, ಇಂದು ಮತ್ತು ನಾಳೆ ಈ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ