newsics.com
ಬೆಂಗಳೂರು: ಬೆಸ್ಕಾಂನಿಂದ ವಿದ್ಯುತ್ ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳುತ್ತಿರುವುದರಿಂದ, ಭಾನುವಾರ(ಅ.20) ಬೆಳಗ್ಗೆ 10 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಕೆಲ ಪ್ರದೇಶಗಳಲ್ಲಿ ಕರೆಂಟ್ ಇರುವುದಿಲ್ಲ ಎಂದು ಬೆಸ್ಕಾಂ ಹೇಳಿದೆ.
66/11ಕೆ.ವಿ ಟೆಲಿಕಾಂ” ಸ್ಟೇಷನ್ ನಲ್ಲಿ 11ಕೆ,ವಿ ಬ್ಯಾಂಕ್-2 ನ ಬ್ರೇಕರಗಳನ್ನು ಬದಲಿಸುವ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಅ.20 ರಿಂದ ಅ.23ರವರೆಗೆ ಬೆಳಗ್ಗೆ 10 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.
ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು: ಓಬಳೇಶ್ ಕಾಲೋನಿ, ರ್ಸಸ್ ಗರ್ಡನ್, ರಾಯಪುರ, ಬಿನ್ನಿ ಪೇಟ್, ಪಾದರಾಯನಪುರ, ಜೆಜೆಆರ್ ನಗರ, ಗೋಪಾಲನ್ ಮಾಲ್, ಮೈಸೂರು ರಸ್ತೆ 1ನೇ, 2ನೇ, 3ನೇ ಕ್ರಾಸ್, ಮೋಮಿಂಪುರ, ಜನತಾ ಕಾಲೋನಿ, ಶಾಮಣ್ಣ ಗಾರ್ಡನ್, ರ್ಫತ್ ನಗರ, ರಂಗನಾಥ್ ಕಾಲೋನಿ, ಹೊಸಹಳ್ಳಿ ಮುಖ್ಯರಸ್ತೆ, ಬಿನ್ನಿ ಪೇಟೆ, ಅಂಜನಪ್ಪ ಗಾರ್ಡನ್, ದೊರೆಸ್ವಾಮಿ ನಗರ, ಹೂವಿನ ಉದ್ಯಾನ, ಹೊಸ ಪೊಲೀಸ್ ಕ್ವಾಟ್ರಸ್ ಪವರ್ ಕಟ್ ಆಗಲಿದೆ.
ಎಸ್ಡಿ ಮಠ, ಕಾಟನ್ ಪೆಟ್, ಅಕ್ಕಿಪೇಟೆ, ಬಾಲಾಜಿ ಕಾಂಪ್ಲೆಕ್ಸ್, ಮನರ್ತಿ ಪೆಟ್, ಸುಲ್ತಾನ್ ಪೆಟ್, ನಲ್ಬಂಡ್ವಾಡಿ ಎದುರು ಚಿಕ್ಕಪೇಟೆ ಮೆಟ್ರೋ ಸ್ಟೇಷನ್, ಪೊಲೀಸ್ ರಸ್ತೆ, ಗೋಪಾಲನ್ ಅಪಾರ್ಟ್ಮೆಂಟ್, ಮರಿಯಪ್ಪ ಎ. ಕೆಪಿಎಸ್ ಮಠ, ಗಂಗಪ್ಪ ಗರ್ಡನ್, ಭುವನೇಶ್ವರಿ ನಗರ, ಪ್ರೆಸ್ಟೀಜ್ ವುಡ್ಸ್ ಅಪಾರ್ಟ್ಮೆಂಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಬೆಸ್ಕಾಂ ಮಾಹಿತಿ ನೀಡಿದೆ.
ದೇಶದ ಅತಿ ದೊಡ್ಡ ಸ್ಟಾರ್ಟ್ಅಪ್ ಬೈಜುಸ್ ಈಗ ಸಂಪೂರ್ಣ ದಿವಾಳಿ: ಸಂಸ್ಥಾಪಕ ಬೈಜು ರವೀಂದ್ರನ್ ಘೋಷಣೆ
ದೀಪಾವಳಿ ಹಬ್ಬದಲ್ಲಿ ಪಟಾಕಿ ಸಿಡಿಸಲು ಎರಡೇ ಗಂಟೆ ಅವಕಾಶ: ಸಚಿವ ಖಂಡ್ರೆ ಮಾಹಿತಿ
ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಪ್ರೌಢಶಾಲೆ ಶಿಕ್ಷಕನಿಗೆ 5 ವರ್ಷ ಜೈಲು ಶಿಕ್ಷೆ