newsics.com
ಬೆಂಗಳೂರು: ದೇಶದ 2ನೇ ಅತೀ ದೊಡ್ಡ ಮೆಟ್ರೋ ರೈಲು ಜಾಲ Namma Metro 14ನೇ ವರ್ಷಕ್ಕೆ ಕಾಲಿಟ್ಟಿದ್ದು, ಬೆಂಗಳೂರು ನಗರಕ್ಕೆ ಒಂದು ಪ್ರಮುಖ ಸಾರ್ವಜನಿಕ ಸಾರಿಗೆ ವಿಧಾನವಾಗಿ ತನ್ನ ಸ್ಥಾನವನ್ನು ಭದ್ರಪಡಿಸಿಕೊಂಡಿದೆ.
ನಮ್ಮ ಮೆಟ್ರೋ ರೈಲು ಸೇವೆ 14 ನೇ ವರ್ಷಕ್ಕೆ ಕಾಲಿಟ್ಟಿದೆ. ಹೌದು, ಅಕ್ಟೋಬರ್ 20, 2011 ರಂದು ಬೆಂಗಳೂರಿನಲ್ಲಿ ಮೊಟ್ಟ ಮೊದಲ ಮೆಟ್ರೋ ರೈಲು ಸೇವೆ ಪ್ರಾರಂಭವಾಗಿತ್ತು. ಆರಂಭಿಕ ಅವಧಿಯಲ್ಲಿ ಬೈಯಪ್ಪನಹಳ್ಳಿ ಮತ್ತು ಎಂಜಿ ರಸ್ತೆ ನಡುವಿನ 6.7-ಕಿಮೀ ಮಾರ್ಗದಲ್ಲಿ ಮೆಟ್ರೊ ಪ್ರಯಾಣ ನಡೆದಿತ್ತು.
ಬಳಿಕ ಕ್ರಮೇಣ ತನ್ನ ಜಾಲವನ್ನು ಮತ್ತು ಮಾರ್ಗವನ್ನು ವಿಸ್ತರಿಸಿಕೊಳ್ಳುತ್ತಾ ಸಾಗಿ ಬೆಂಗಳೂರಿಗರು ಇಂದು ಪೂರ್ಣಗೊಂಡ ಹೊಸ ಮೆಟ್ರೋ ಮಾರ್ಗಗಳನ್ನು ಬಳಕೆ ಮಾಡಲು ಉತ್ಸುಕರಾಗಿದ್ದಾರೆ. ಅಂತೆಯೇ ಇಂದು ಮೆಟ್ರೋರೈಲು ಖ್ಯಾತಿಗೆ ಹೇಗಿದೆ ಎಂದರೆ ಹೊಸ ಹೊಸ ಮಾರ್ಗಗಳಲ್ಲಿ ಮೆಟ್ರೋ ರೈಲು ಸಂಪರ್ಕ ನೀಡುವಂತೆ ಪ್ರಯಾಣಿಕರು ಒತ್ತಾಯಿಸುತ್ತಿದ್ದಾರೆ.