newsics.com
ಬೆಂಗಳೂರು: ಬಾಬುಸಾಬ್ ಪಾಳ್ಯದಲ್ಲಿ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಣ್ಣೂರು ಠಾಣೆಯಲ್ಲಿ ಕಟ್ಟಡ ಮಾಲೀಕ ಮುನಿರಾಜು ರೆಡ್ಡಿ ಹಾಗೂ ಆತನ ಮಗನ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ನಾಲ್ಕು ಅಂತಸ್ತಿನ ಕಟ್ಟಡ ನಿರ್ಮಾಣಕ್ಕೆ ಅನುಮತಿ ಪಡೆದು ಏಳು ಅಂತಸ್ತಿನ ಕಟ್ಟಡ ನಿರ್ಮಿಸಿ ನಿಯಮ ಉಲ್ಲಂಘಿಸಿದ ಹಾಗೂ ಕಳಪೆ ಕಾಮಗಾರಿಗೆ ಕಾರಣರಾದ ಆರೋಪದ ಮೇಲೆ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.
ಕಟ್ಟಡ ಕುಸಿದ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಇನ್ನೂ ಮೂವರು ಅವಶೇಷಗಳ ಅಡಿ ಸಿಲುಕಿರುವ ಶಂಕೆಯಿದೆ. ಇದುವರೆಗೂ 18 ಮಂದಿಯನ್ನು ರಕ್ಷಣೆ ಮಾಡಲಾಗಿದೆ. ಐವರ ಮೃತದೇಹ ಪತ್ತೆಯಾಗಿದೆ. ಸದ್ಯ ನಾರ್ತ್ ಆಸ್ಪತ್ರೆಯಲ್ಲಿ ನಾಲ್ವರು ಹಾಗೂ ಮತ್ತೊಂದು ಆಸ್ಪತ್ರೆಯಲ್ಲಿ ಒಬ್ಬ ಗಾಯಾಳುವಿಗೆ ಚಿಕಿತ್ಸೆ ನೀಡಲಾಗುತ್ತಿದೆ.
‘ಕಮಲ’ ಬಿಟ್ಟು *ಕೈ’ ಹಿಡಿದ ಸೈನಿಕ; ಸಿಎಂ, ಡಿಸಿಎಂ ಸಮ್ಮುಖದಲ್ಲಿ ಸಿಪಿವೈ ಕಾಂಗ್ರೆಸ್ ಸೇರ್ಪಡೆ
ಉದ್ಯಮಿ ಜಯ ಶೆಟ್ಟಿ ಕೊಲೆ ಕೇಸ್; ಗ್ಯಾಂಗ್‌ಸ್ಟರ್ ಚೋಟಾ ರಾಜನ್‌ಗೆ ಜಾಮೀನು