Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಇಂದೂ ಭಾರೀ ಮಳೆ ಸಾಧ್ಯತೆ, ಕಟ್ಟಡ ಕುಸಿತದಲ್ಲಿ ಮೃತರ ಸಂಖ್ಯೆ ಐದಕ್ಕೇರಿಕೆ
ಕರ್ನಾಟಕಪ್ರಮುಖ

ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಇಂದೂ ಭಾರೀ ಮಳೆ ಸಾಧ್ಯತೆ, ಕಟ್ಟಡ ಕುಸಿತದಲ್ಲಿ ಮೃತರ ಸಂಖ್ಯೆ ಐದಕ್ಕೇರಿಕೆ

Share
1 Min Read
SHARE

newsics.com

ಬೆಂಗಳೂರು: ಕಳೆದೊಂದು ವಾರದಿಂದ ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಸುರಿಯುತ್ತಿರುವ ಮಳೆ ಬುಧವಾರವೂ(ಅ.23) ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರು ನಗರ ಸೇರಿ ರಾಜ್ಯದ 12ಕ್ಕೂ ಹೆಚ್ವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ನಗರದ ದಕ್ಷಿಣ ಭಾಗದಲ್ಲಿ ಬುಧವಾರ ಮಧ್ಯಾಹ್ನ ಬಳಿಕ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ಸುರಿದ ಭಾರೀ‌ ಮಳೆಯಿಂದಾಗಿ ಬೆಂಗಳೂರಿನ ಬಹುತೇಕ ಭಾಗದಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. 10 ಸಾವಿರಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ. ಕೇಂದ್ರೀಯ ವಿಹಾರ ಸೇರಿದಂತೆ ಹಲವು ಅಪಾರ್ಟ್‌ಮೆಂಟ್‌ಗಳು, ಕ್ವಾಟ್ರರ್ಸ್‌ಗಳು ಜಲಾವೃತವಾಗಿವೆ.

ಇನ್ನು, ಭಾರೀ ಮಳೆ ಹಿನ್ನೆಲೆಯಲ್ಲಿ ಮಂಗಳವಾರ ಸಂಭವಿಸಿದ ನಿರ್ಮಾಣ ಹಂತದಲ್ಲಿದ್ದ ಕಟ್ಟಡ ಕುಸಿತ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ ಐದಕ್ಕೇರಿಕೆಯಾಗಿದೆ. ಕಟ್ಟಡ ಅವಶೇಷಗಳ ಅಡಿ ಸಿಲುಕಿರುವ 21 ಕಾರ್ಮಿಕರ ರಕ್ಷಣೆಗೆ ಕಾರ್ಯಾಚರಣೆ ಮುಂದುವರಿದಿದೆ.

ನಗರದ ಹೆಣ್ಣೂರು ಸಮೀಪದ ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದುಬಿದ್ದಿದ್ದು, ಮಂಗಳವಾರ ನಾಲ್ವರ ಶವ ಹೊರತೆಗೆಯಲಾಗಿತ್ತು. ರಕ್ಷಣೆ ಮಾಡಲಾಗಿದ್ದ ಇಬ್ಬರು ಕಾರ್ಮಿಕರ ಪೈಕಿ ಓರ್ವ ಸಾವನ್ನಪ್ಪಿದ್ದಾನೆ.

21 ಕಾರ್ಮಿಕರ ರಕ್ಷಣೆಗೆ ಎನ್‌ಡಿಆರ್‌ಎಫ್ ಹಾಗೂ ಅಗ್ನಿಶಾಮಕ ಸಿಬ್ಬಂದಿ ಸತತವಾಗಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಪಿಲ್ಲರ್ ಹಾಗೂ ಕಟ್ಟಡದ ಅವಶೇಷಗಳನ್ನು ಗ್ಯಾಸ್ ಕಟರ್ ಮೂಲಕ ಒಡೆದು ಕಾರ್ಮಿಕರನ್ನು ರಕ್ಷಿಸುವ ಕಾರ್ಯದಲ್ಲಿ ತೊಡಗಿದ್ದಾರೆ.

ಅವೈಜ್ಞಾನಿಕವಾಗಿ ಕಟ್ಟಡ ನಿರ್ಮಿಸಿದ ಹಿನ್ನೆಲೆ ಕಟ್ಟಡ ಮಾಲೀಕ ಸೇರಿ ಹಲವರ ವಿರುದ್ಧ ಹೆಣ್ಣೂರು ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ನಾಲ್ಕು ಅಂತಸ್ತಿನ ಕಟ್ಟಡಕ್ಕೆ ಅನುಮತಿ ಪಡೆದು 7 ಅಂತಸ್ತಿನ ಕಟ್ಟಡ ನಿರ್ಮಿಸಲಾಗಿತ್ತು.

ಬೆಂಗಳೂರಲ್ಲಿ ಭಾರೀ‌ ಮಳೆ, ಕಟ್ಟಡ ಕುಸಿತ: ಐವರ ಸಾವು? ಮೂವರ ಶವ ಹೊರಕ್ಕೆ, ಅವಶೇಷಗಳಡಿ 17ಕ್ಕೂ ಹೆಚ್ಚು ಕಾರ್ಮಿಕರು

ಸಲ್ಮಾನ್ ಬೆನ್ನತ್ತಿರುವ ಲಾರೆನ್ಸ್ ಬಿಷ್ಣೋಯಿ ಕೊಂದರೆ 1,11,11,111 ರೂ. ಬಹುಮಾನ! ಯಾರು ಈ ಘೋಷಣೆ ಮಾಡಿದ್ದು?

ಕಾಮನ್ವೆಲ್ತ್ ಕ್ರೀಡಾಕೂಟ: 9 ಆಟಗಳಿಗೆ ಗೇಟ್‌ಪಾಸ್, ಭಾರತಕ್ಕೆ ಗ್ರೇಟ್ ಲಾಸ್

ಕನ್ನಡ ಕಲಿಸುವ ಆಟೋ ಡ್ರೈವರ್‌ ಐಡಿಯಾಗೆ ನೆಟ್ಟಿಗರ ಮೆಚ್ಚುಗೆ

ರಾತ್ರೋರಾತ್ರಿ ಬಳ್ಳಾರಿ ಜೈಲಿನಿಂದ ಆಂಬ್ಯುಲೆನ್ಸ್ ಮೂಲಕ ದರ್ಶನ್ ಶಿಫ್ಟ್

TAGGED:and the death toll in building collapse has risen to fiveHeavy rain is likely in many parts of the stateincluding Bangalore
Share This Article
Facebook Twitter Copy Link Print
Previous Article 5 ವರ್ಷಗಳ ಬಳಿಕ ಮೋದಿ- ಜಿನ್ ಪಿಂಗ್ ಮಾತುಕತೆ..!
Next Article newsics ದಿನ ಭವಿಷ್ಯ… 23-10-2024, ಬುಧವಾರ, ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?