newsics.com
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಮುಗಿದ ಬೆನ್ನಲ್ಲೇ ಅಂಬಾವಿಲಾಸ ಅರಮನೆಯ ಪ್ರವೇಶ ದರವನ್ನು ಹೆಚ್ಚಿಸಲಾಗಿದೆ.
ಪ್ರವಾಸಿಗರಿಗೆ ಅರಮನೆ ಮಂಡಳಿ ಟಿಕೆಟ್ ದರ ಏರಿಕೆಯ ಮೂಲಕ ಶಾಕ್ ನೀಡಿದೆ. ಇದರಿಂದಾಗಿ ವಿಶ್ವವಿಖ್ಯಾತ ಮೈಸೂರು ಅರಮನೆಗೆ ದಿನನಿತ್ಯ ದೇಶ-ವಿದೇಶಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಅರಮನೆ ವೀಕ್ಷಣೆಗಾಗಿ ಆಗಮಿಸುವ ಪ್ರವಾಸಿಗರ ಜೇಬಿಗೆ ಕತ್ತರಿ ಬಿದ್ದಿದೆ.
ವಯಸ್ಕರಿಗೆ ಇದ್ದ ಟಿಕೆಟ್ ದರವನ್ನು 100 ರೂ. ನಿಂದ 120 ರೂ.ಗೆ ಏರಿಕೆ ಮಾಡಲಾಗಿದೆ. ವಿದೇಶಿ ಪ್ರವಾಸಿಗರ ಟಿಕೆಟ್ ದರವನ್ನು 300 ರೂನಿಂದ 1000 ರೂ.ಗಳಿಗೆ ಏರಿಸಲಾಗಿದೆ. 10 ರಿಂದ 18 ವರ್ಷದೊಳಗಿನ ಮಕ್ಕಳಿಗೆ 70 ರೂ., 10 ವರ್ಷದೊಳಗಿನ ಮಕ್ಕಳಿಗೆ ಉಚಿತ ಪ್ರವೇಶವಿದೆ. ಶೈಕ್ಷಣಿಕ ಪ್ರವಾಸ ಕೈಗೊಳ್ಳುವ ಶಾಲಾ/ಕಾಲೇಜು
ವಿದ್ಯಾರ್ಥಿಗಳಿಗೆ ರಿಯಾಯಿತಿ ದರ 50 ರೂ. ಹಾಗೂ ವಿದೇಶಿ ಪ್ರವಾಸಿಗರಿಗೆ 1000 ರೂ. ಅನುಮೋದಿತ ಪರಿಷ್ಕೃತ ಶುಲ್ಕವನ್ನು ನಿಗದಿ ಮಾಡಲಾಗಿದೆ. ಧ್ವನಿ ಮತ್ತು ಬೆಳಕು ವೀಕ್ಷಣೆಗೆ 70 ರೂ. ನಿಗದಿಪಡಿಸಲಾಗಿದೆ ಎಂದು ಮೈಸೂರು ಅರಮನೆ ಮಂಡಳಿಯ ಉಪ ನಿರ್ದೇಶಕರು ತಿಳಿಸಿದ್ದಾರೆ.
ಪ್ರವಾಸಿಗರ ಅನುಕೂಲಕ್ಕಾಗಿ ಅರಮನೆಯ ಒಳಾವರಣದಲ್ಲಿ ಬರುವ ಚಪ್ಪಲಿ ಸ್ಟ್ಯಾಂಡ್, ಲಗ್ಗೇಜ್ ಕೊಠಡಿ ಮತ್ತು ಶೌಚಾಲಯಗಳನ್ನು ಪ್ರವಾಸಿಗರಿಗೆ ಉಚಿತಗೊಳಿಸಿ ಅರಮನೆಯ ಪ್ರವೇಶ ಶುಲ್ಕವನ್ನು ಪರಿಷ್ಕರಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇಂದಿನಿಂದ ಧ್ವನಿ ಮತ್ತು ಬೆಳಕು:
ನಾಡಹಬ್ಬ ಮೈಸೂರು ದಸರಾ ಸಂಬಂಧ ತಾತ್ಕಾಲಿಕವಾಗಿ ರದ್ದುಪಡಿಸಲಾಗಿದ್ದ ಮೈಸೂರು ಅರಮನೆ ಆವರಣದಲ್ಲಿ ಸಂಜೆ ನಡೆಯುವ ಧ್ವನಿ ಮತ್ತು ಬೆಳಕು ಕಾರ್ಯಕ್ರಮವು ಇಂದಿನಿಂದ(ಅ.24) ಪುನರಾರಂಭಗೊಳ್ಳಲಿದೆ ಎಂದು ಮೈಸೂರು ಅರಮನೆ ಮಂಡಳಿಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಳೆಗಾಲದಲ್ಲಿ ಟಿವಿ-ಫ್ರಿಡ್ಜ್ ಅನ್ನು ರಕ್ಷಿಸುವುದು ಹೇಗೆ? ಈ ಟಿಪ್ಸ್ ಪಾಲಿಸಿ!
ನಟಿಯರಿಗೆ ಟಿಶ್ಯೂ ಸೀರೆಯೆಂದರೆ ಯಾಕೆ ಅಷ್ಟು ಇಷ್ಟ; ಈ ಸೀರೆಗೆ ಹೆಚ್ಚಿದ ಡಿಮ್ಯಾಂಡ್