newsics.com
ಬೆಂಗಳೂರು: ಕೊನೆಗೂ ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆಗೆ ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿಯವರು ಕಣಕ್ಕಿಳಿದಿದ್ದಾರೆ. ಈ ಮೂಲಕ ಚನ್ನಪಟ್ಟಣ ಉಪಚುನಾವಣೆ ಅಖಾಡ ಹೈವೋಲ್ಟೇಜ್ ಪಡೆದುಕೊಂಡಿದೆ.
ಬಿಜೆಪಿ ತೊರೆದು ಕಾಂಗ್ರೆಸ್ನಿಂದ ಕಣಕ್ಕಿಳಿದಿರುವ ಸೈನಿಕನ ವಿರುದ್ಧ ಬಿಜೆಪಿ ಜೆಡಿಎಸ್ ದೋಸ್ತಿ ಪಡೆ ನಿಖಿಲ್ ಕುಮಾರಸ್ವಾಮಿಯನ್ನು ಚುನಾವಣಾ ಅಖಾಡಕ್ಕೆ ಇಳಿಸಿದೆ.
ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಅಂಬರೀಶ್ ಅವರ ವಿರುದ್ಧ ಸ್ಪರ್ಧಿಸಿದ ಚುನಾವಣೆ ಅಂತೆಯೇ ಚನ್ನಪಟ್ಟಣ ಉಪಚುನಾವಣೆ ಕೂಡ ಹೈವೋಲ್ಟೇಜ್ ಕದನವಾಗಿ ಮಾರ್ಪಟ್ಟಿದೆ.
ಇನ್ನು ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನವಾಗಿದ್ದು, ನಿಖಿಲ್ ಕುಮಾರಸ್ವಾಮಿಯವರು ಬಿಜೆಪಿ-ಜೆಡಿಎಸ್ ನಾಯಕರ ಜೊತೆಗೂಡಿ ನಾಮಪತ್ರ ಸಲ್ಲಿಸಲಿದ್ದಾರೆ.
ನಿಖಿಲ್ ಕುಮಾರಸ್ವಾಮಿ ಅವರು 2019ರಲ್ಲಿ ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಅಂಬರೀಷ್ ವಿರುದ್ಧ ಸೋಲು ಅನುಭವಿಸಿದ್ದರು. ಅಲ್ಲದೇ, 2023ರ ವಿಧಾನಸಭಾ ಚುನಾವಣೆಯಲ್ಲಿ ರಾಮನಗರ ಕ್ಷೇತ್ರದಿಂದ ಸ್ಪರ್ಧಿಸಿ ಕಾಂಗ್ರೆಸ್ ಅಭ್ಯರ್ಥಿ ಇಕ್ಬಾಲ್ ಹುಸೇನ್ ವಿರುದ್ಧ ಸೋಲು ಅನುಭವಿಸಿದ್ದರು. ಈಗ ಮೂರನೇ ಬಾರಿಗೆ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ