ಪತಿ ಎದುರೇ ಪತ್ನಿ ಮೇಲೆ ಗ್ಯಾಂಗ್‌ ರೇಪ್‌

newsics.com ಭೋಪಾಲ್: ಪಿಕ್ನಿಕ್ ಸ್ಪಾಟ್‌ನಲ್ಲಿ ದಂಪತಿ ಮೇಲೆ ಹಲ್ಲೆ ನಡೆಸಿ, ವ್ಯಕ್ತಿಯನ್ನು ಮರಕ್ಕೆ ಕಟ್ಟಿಹಾಕಿ ಆತನ ಪತ್ನಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಆಕೆಯ ಅತ್ಯಾಚಾರಿಗಳು ಹಲ್ಲೆಯ ದೃಶ್ಯಗಳನ್ನು ಚಿತ್ರೀಕರಿಸಿ, ದಂಪತಿಗೆ ಬೆದರಿಕೆ ಹಾಕಿದ್ದಾರೆ. ಪೊಲೀಸರಿಗೆ ದೂರು ನೀಡಿದರೆ ವೀಡಿಯೊವನ್ನು ಆನ್‌ಲೈನ್‌ನಲ್ಲಿ ಬಿಡುಗಡೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. ಅ.21 ರಂದು ಘಟನೆ ನಡೆದಿದೆ. ಮರುದಿನ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಕೆಲ ಆರೋಪಿಗಳನ್ನು ಬಂಧಿಸಿದ್ದಾರೆ