Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮರಕುಂಬಿ ಪ್ರಕರಣ: ಕೋರ್ಟ್ ಶಿಕ್ಷೆ ವಿಷಯ ತಿಳಿದು ಓರ್ವ ಅಪರಾಧಿ ಸಾವು
ಕರ್ನಾಟಕಪ್ರಮುಖ

ಮರಕುಂಬಿ ಪ್ರಕರಣ: ಕೋರ್ಟ್ ಶಿಕ್ಷೆ ವಿಷಯ ತಿಳಿದು ಓರ್ವ ಅಪರಾಧಿ ಸಾವು

Share
2 Min Read
SHARE

newsics.com

ಕೊಪ್ಪಳ: ಕಳೆದ 2014ರಲ್ಲಿ ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನಲ್ಲಿ ಮರಕುಂಬಿ ಗ್ರಾಮದಲ್ಲಿ ನಡೆದಿದ್ದ ದಲಿತರು ಹಾಗೂ ಸವರ್ಣೀಯರ ನಡುವಿನ ಗಲಾಟೆ ಪ್ರಕರಣದ 98 ಆರೋಪಿಗಳಿಗೆ ಜಿಲ್ಲಾ ನ್ಯಾಯಾಲಯದಿಂದ ಜೀವಾವಧಿ ಶಿಕ್ಷೆ ಪ್ರಕಟವಾಗಿದೆ. ಶಿಕ್ಷೆ ಪ್ರಕಟ ಸುದ್ದಿ ಕೇಳುತ್ತಿದ್ದಂತೆಯೇ ಅಪರಾಧಿ ರಾಮಪ್ಪ ಭೋವಿ (44) ಮೃತಪಟ್ಟಿದ್ದಾರೆ.

ಕಳೆದ 10 ವರ್ಷಗಳ ಹಿಂದೆ ಮರಕುಂಬಿ ಗ್ರಾಮದಲ್ಲಿ ನಡೆದಿದ್ದ ಗಲಾಟೆ ಪ್ರಕರಣವು ಇಡೀ ರಾಜ್ಯಕ್ಕೆ ಕಪ್ಪು ಚುಕ್ಕೆಯಂತಾಗಿತ್ತು. ಗಂಗಾವತಿ ಪಟ್ಟಣದ ಸಿನಿಮಾ ಮಂದಿರದಲ್ಲಿ ಟಿಕೆಟ್ ವಿಚಾರಕ್ಕೆ ಆರಂಭವಾದ ಜಗಳ ಮರಕುಂಬಿ ಗ್ರಾಮದಲ್ಲಿ ಸಮುದಾಯಗಳ ನಡುವಿನ ಕಲಹಕ್ಕೆ ವಿಸ್ತರಣೆಗೊಂಡಿತ್ತು. ಗ್ರಾಮದಲ್ಲಿ ದಲಿತರ ಮೇಲೆ ಅಸ್ಪೃಶ್ಯತೆ ಮಾಡುತ್ತಾ ದಲಿತರನ್ನು ಪ್ರಾಣಿಗಳಿಗಿಂತ ಕೀಳಾಗಿ ಕಾಣಲು ಆರಂಭಿಸಿದರು. ಅಸ್ಪೃಶ್ಯತೆಯನ್ನು ವಿರೋಧಿಸಿದ ದಲಿತರ ಮನೆಗಳು ಹಾಗೂ ಗುಡಿಸಲುಗಳನ್ನು ಸವರ್ಣೀಯರು ಸುಟ್ಟು ಹಾಕಿ ವಿಕೃತಿ ಮೆರೆದಿದ್ದರು.

ಇದೀಗ ನ್ಯಾಯಾಲಯದಲ್ಲಿ ಮರಕುಂಬಿ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಪು ಪ್ರಕಟ ಮಾಡಲಾಗಿದೆ. ಈ ಕೇಸಿನಲ್ಲಿ ಒಟ್ಟು 117 ಆರೋಪಿಗಳಿದ್ದರು. 117 ಜನರ ಪೈಕಿ 101 ಜನರಿಗೆ ಶಿಕ್ಷೆ ಪ್ರಕಟವಾಗಿದೆ.

ಇನ್ನುಳಿದ 16 ಜನರಲ್ಲಿ ಕೆಲವರು ಮೃತಪಟ್ಟಿದ್ದು, ಇನ್ನು ಕೆಲವರ ಹೆಸರುಗಳು ಪುನರಾವರ್ತನೆ ಆಗಿದ್ದವು. ಹೀಗಾಗಿ ಸದ್ಯ 101 ಅಪರಾಧಿಗಳಿಗೆ ಇದೀಗ ಶಿಕ್ಷೆಯಾಗಿದೆ. ಅದರಲ್ಲಿ 98 ಜನರಿಗೆ ಜೀವಾವಧಿ ಶಿಕ್ಷೆ ಹಾಗೂ ತಲಾ 5,000 ರೂ. ದಂಡ ವಿಧಿಸಲಾಗಿದೆ. ಬಾಕಿ ಮೂವರು ಅಪರಾಧಿಗಳು ಎಸ್‌ಸಿ, ಎಸ್‌ಟಿ ವರ್ಗಕ್ಕೆ ಸೇರಿದವರಾಗಿದ್ದರಿಂದ ಅವರಿಗೆ ಜಾತಿನಿಂದನೆ ಕಾಯ್ದೆ ಅನ್ವಯವಾಗಿರಲಿಲ್ಲ. ಹೀಗಾಗಿ, ಕೊಲೆ ಯತ್ನ ಸೇರಿದಂತೆ ಇತರ ಸೆಕ್ಷನ್ ಅಡಿಯಲ್ಲಿ 5 ವರ್ಷಗಳ ಶಿಕ್ಷೆ ಹಾಗೂ ತಲಾ 2,000 ರೂ. ದಂಡವನ್ನು ವಿಧಿಸಲಾಗಿದೆ.

ಮರಕುಂಬಿ ಗಲಾಟೆ ಪ್ರಕರಣದಲ್ಲಿ ಭಾಗಿಯಾಗಿದ್ದ ರಾಮಪ್ಪ ಭೋವಿ (44) ಅವರನ್ನು ಕೊಪ್ಪಳ ಜಿಲ್ಲಾ ಕಾರಾಗೃಹದಲ್ಲಿಯೇ ಇರಿಸಲಾಗಿತ್ತು. ಇನ್ನು ಕೋರ್ಟ್‌ನಲ್ಲಿ ಶಿಕ್ಷೆ ಪ್ರಕಟ ಆಗುತ್ತಿದ್ದಂತೆ ಈ ವಿಚಾರ ತಿಳಿದ ರಾಮಪ್ಪನಿಗೆ ಭಾರೀ ಚಿಂತೆಗೀಡಾಗಿದ್ದು, ನಿನ್ನೆ ತಡರಾತ್ರಿ ಆರೋಗ್ಯದಲ್ಲಿ ಏರುಪೇರಾಗಿತ್ತು. ಈ ಹಿನ್ನೆಲೆಯಲ್ಲಿ ಅಪರಾಧಿಯನ್ನು ಕೂಡಲೆ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ರಾಮಪ್ಪ ಸಾವಿಗೀಡಾಗಿದ್ದಾನೆ.

ಡಾನಾ ಚಂಡಮಾರುತ: ಉತ್ತರ ವಾಯವ್ಯ ದಿಕ್ಕಿನತ್ತ ಗಂಟೆಗೆ 120 ಕಿ.ಮೀ ವೇಗದಲ್ಲಿ ಚಲನೆ

ನೀವೆಂಥ ತುಟಿಯವರು…? ತುಟಿಯಿಂದಲೇ ತಿಳಿಯಿರಿ ನಿಮ್ಮವರ ಸ್ವಭಾವ!

ಬಿಗ್ ಬಾಸ್ ಇತಿಹಾಸದಲ್ಲೇ ಮೊದಲು… ಮನೆಗೆ ಬಂದು ಧಿಕ್ಕಾರ ಹಾಕಿದ ಜನಸಾಮಾನ್ಯರು..!

ಇಂದಿನಿಂದ ಹಾಸನಾಂಬಾ ದರ್ಶನಕ್ಕೆ ಅವಕಾಶ

ಬಾನೆಟ್‌ ಮೇಲೆ ಕಾನ್‌ಸ್ಟೇಬಲ್‌ನನ್ನು ಎಳೆದೊಯ್ದಿದ್ದ ಚಾಲಕ ಅರೆಸ್ಟ್‌

TAGGED:Marakumbi case: A criminal died after knowing the court sentence
Share This Article
Facebook Twitter Copy Link Print
Previous Article ಬಿಗ್ ಬಾಸ್ ಇತಿಹಾಸದಲ್ಲೇ ಮೊದಲು… ಮನೆಗೆ ಬಂದು ಧಿಕ್ಕಾರ ಹಾಕಿದ ಜನಸಾಮಾನ್ಯರು..!
Next Article NCP ಸೇರ್ಪಡೆಯಾದ ಬಾಬಾ ಸಿದ್ದೀಕಿ ಪುತ್ರ ಜೀಶನ್

Popular Posts

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

You Might Also Like

ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?