newsics.com
ನವದೆಹಲಿ: ನವದೆಹಲಿ: ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ರಿಯಾ ಚಕ್ರವರ್ತಿ ಅವರಿಗೆ ಸುಪ್ರೀಂಕೋರ್ಟ್ ನಿಂದ ಬಿಗ್ ರಿಲೀಫ್ ಸಿಕ್ಕಿದೆ.
ರಿಯಾ ಚಕ್ರವತ್ರಿಗೆ ವಿರುದ್ಧ ಸಿಬಿಐ ಹೊರಡಿಸಿದ್ದ ಲುಕ್ ಔಟ್ ನೋಟಿಸ್ ಅನ್ನು ನ್ಯಾಯಾಲಯ ಶುಕ್ರವಾರ(ಅಕ್ಟೋಬರ್ 25) ವಜಾಗೊಳಿಸಿದೆ. ಬಾಂಬೆ ಹೈಕೋರ್ಟ್ ತೀರ್ಪನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಮತ್ತು ಆಕೆಯ ಸಹೋದರ ಶೋವಿಕ್, ಆಕೆಯ ತಂದೆ ಇಂದ್ರಜಿತ್ ಚಕ್ರವರ್ತಿ ವಿರುದ್ಧ ಕೇಂದ್ರೀಯ ತನಿಖಾ ದಳ 2020ರಲ್ಲಿ ಲುಕ್ ಔಟ್ ನೋಟಿಸ್ ಅನ್ನು ಹೊರಡಿಸಿತ್ತು. ಸಿಬಿಐ ಹೊರಡಿಸಿದ್ದ ಲುಕ್ ಔಟ್ ನೋಟಿಸ್ ಅನ್ನು ಫೆಬ್ರವರಿಯಲ್ಲಿ ಬಾಂಬೆ ಹೈಕೋರ್ಟ್ ರದ್ದುಗೊಳಿಸಿತ್ತು. ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಿಬಿಐ ಸುಪ್ರೀಂಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿತ್ತು. ಸುಪ್ರೀಂ ಕೋರ್ಟ್ ಸಿಬಿಐ ಮನವಿಯನ್ನು ತಿರಸ್ಕರಿಸಿದೆ.
ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಮತ್ತು ಕೆ.ವಿ.ವಿಶ್ವನಾಥನ್ ಅವರಿದ್ದ ಪೀಠವು ಮೌಖಿಕವಾಗಿ ಸಿಬಿಐ ಮನವಿಯು ಕ್ಷುಲ್ಲಕ ಎಂದು ಹೇಳಿದೆ.
ಜೂನ್ 12, 2020ರಂದು ನಟ ಸುಶಾಂತ್ ಸಿಂಗ್ ಅವರ ಮೃತದೇಹ ಬಾಂದ್ರಾದಲ್ಲಿರುವ ಅವರ ಅಪಾರ್ಟ್ ಮೆಂಟ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಈ ಸಂಬಂಧ ನಟನ ಕುಟುಂಬಸ್ಥರು ನಟಿ ರಿಯಾ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದರು