2ನೇ ದಿನವೂ ಹಾಸನಾಂಬೆ ದರ್ಶನಕ್ಕೆ ಹರಿದು ಬಂದ ಭಕ್ತರ ದಂಡು

newsics.com ಹಾಸನ: ಹಾಸನಾಂಬೆ ದೇವಿ ದರ್ಶನಕ್ಕೆ ಎರಡನೇ ದಿನವಾದ ಶನಿವಾರದಂದು ಭಕ್ತರ ದಂಡು ಹರಿದು ಬರುತ್ತಿದೆ. ನಸುಕಿನ ನಾಲ್ಕು ಗಂಟೆಯಿಂದಲೇ ಹಾಸನ ದೇವಿ ದರ್ಶನ ಆರಂಭಗೊಂಡಿದೆ. ಮಧ್ಯರಾತ್ರಿಯಿಂದಲೇ ಸರತಿ ಸಾಲಿನಲ್ಲಿ ನಿಂತಿದ್ದ ಭಕ್ತರು ದೇವಿಯ ದರ್ಶನ ಪಡೆಯುತ್ತಿದ್ದಾರೆ. ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದೇಗುಲದ ಗರ್ಭಗುಡಿಯ ಬಾಗಿಲನ್ನು ಗುರುವಾರ ಶಾಸ್ತ್ರೋಕ್ತವಾಗಿ ತೆರೆಯಲಾಯಿತು. ವೀಕೆಂಡ್ ಹಿನ್ನೆಲೆಯಲ್ಲಿ ಭಕ್ತರ ಸಂಖ್ಯೆ ಹೆಚ್ಚಾಗಿದೆ. ಸಾವಿರ ರೂ., ಮುನ್ನೂರು ರೂ. ಪಾವತಿಸಿದರೆ ವಿಶೇಷ ದರ್ಶನವಿರುತ್ತದೆ. ಈ ಸಾಲಿನಲ್ಲೂ ಸಾವಿರಾರು ಸಂಖ್ಯೆಯಲ್ಲಿ ಭಕ್ತರಿದ್ದಾರೆ. ಅತಿ … Continue reading 2ನೇ ದಿನವೂ ಹಾಸನಾಂಬೆ ದರ್ಶನಕ್ಕೆ ಹರಿದು ಬಂದ ಭಕ್ತರ ದಂಡು