newsics.com
ಬೆಂಗಳೂರು: ಇದೀಗ ಬೆಂಗಳೂರು ಟು ಅಯೋಧ್ಯೆ ಮಧ್ಯೆ ಸಂಚರಿಸುವ ಆಕಾಶ್ ಏರ್‌ಲೈನ್ಸ್ಗೆ ಹುಸಿಬಾಂಬ್ ಬೆದರಿಕೆ ಬಂದಿದೆ. ತಕ್ಷಣ ತುರ್ತು ಭೂಸ್ಪರ್ಶ ಮಾಡಿ ಪ್ರಯಾಣಿಕರನ್ನು ಪ್ರಾಣಾಪಾಯದಿಂದ ರಕ್ಷಿಸಲಾಗಿದೆ.
ಅಯೋಧ್ಯೆ ವಾಲ್ಮೀಕಿ ಅಂತಾರಾಷ್ಟ್ರೀಯ ಏರ್‌ಪೋರ್ಟ್‌ನಲ್ಲಿ ಎಮರ್ಜೆನ್ಸಿ ಲ್ಯಾಂಡಿಂಗ್ ಮಾಡಲಾಗಿದೆ.
ವಿಮಾನದಲ್ಲಿ ಪರಿಶೀಲನೆ ಬಳಿಕ ಯಾವುದೇ ಬಾಂಬ್ ಪತ್ತೆಯಾಗದ ಹಿನ್ನೆಲೆ ಹುಸಿಬಾಂಬ್ ಎಂದು ಅಯೋಧ್ಯೆ ಏರ್‌ಪೋರ್ಟ್ ನಿರ್ದೇಶಕ ವಿನೋದ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.