newsics.com
ಬೆಂಗಳೂರು: ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪರಮಾಪ್ತ ರಾಕೇಶ್ ಪಾಪಣ್ಣ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಸಿಎಂ ಆಪ್ತ ರಾಕೇಶ್ ಪಾಪಣ್ಣಗೂ ಶಾಕ್ ನೀಡಿರುವ ಇಡಿ ಮೈಸೂರಿನ ಹಿನಕಲ್ ನಿವಾಸದ ಮೇಲೆ ದಾಳಿ ನಡೆಸಿ, ತೀವ್ರ ಶೋಧ ನಡೆಸಿದೆ. ಅಲ್ಲದೇ ರಾಕೇಶ್ ಪಾಪಣ್ಣ ಅವರನ್ನೂ ವಿಚಾರಣೆಗೆ ಒಳಪಡಿಸಿದೆ. ಇದೇ ಸಂದರ್ಭದಲ್ಲಿ ಬೆಂಗಳೂರಿನ ಮಲ್ಲೇಶ್ವರದ 10ನೇ ಕ್ರಾಸ್‌ನಲ್ಲಿರುವ ಮುಡಾ ಮಾಜಿ ಆಯುಕ್ತ ಡಿ.ಬಿ ನಟೇಶ್ ಅವರ ನಿವಾಸದ ಮೇಲೂ ಇಡಿ ಅಧಿಕಾರಿಗಳ ತಂಡ ದಾಳಿ ನಡೆಸಿದೆ. ದಾಳಿ ನಡೆಸಿದ ಅಧಿಕಾರಿಳು ತೀವ್ರ ಶೋಧ ನಡೆಸುತ್ತಿದ್ದಾರೆ. ವಿವಿಧ ದಾಖಲೆಗಳನ್ನ ಪರಿಶೀಲಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸಿದ್ದರಾಮಯ್ಯರ ಕಟ್ಟಾ ಬೆಂಬಲಿಗನಾದ ರಾಕೇಶ್ ಪಾಪಣ್ಣಗೆ ಇದೇ ವರ್ಷದ ಜೂನ್ ನಲ್ಲಿ ಅಂದಿನ ಮುಡಾ ಆಯುಕ್ತ ದಿನೇಶ್ ಕುಮಾರ್ 50:50 ಅನುಪಾತದಲ್ಲಿ ಒಟ್ಟು 98,850 ಚದರ ಅಡಿ ಜಾಗವನ್ನು ಪರಿಹಾರ ರೂಪದಲ್ಲಿ ನೀಡಿದ್ದರು. ಅಲ್ಲದೇ ಕೆಲವು 50:50 ಅನುಪಾತದ ನಿವೇಶನ ಹಂಚಿಕೆಯಲ್ಲೂ ರಾಕೇಶ್ ಪಾಪಣ್ಣ ಮಧ್ಯಸ್ಥಿಕೆ ಇದೆ ಎಂಬ ಆರೋಪ ಕೇಳಿಬಂದಿದೆ.