newsics.com
ರಾಜಸ್ಥಾನ: ಸಿಕಾರ್ ಜಿಲ್ಲೆಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ 12 ಜನರ ದುರ್ಮರಣವನ್ನು ಅಪ್ಪಿದ್ದು, 40 ಜನರಿಗೆ ಗಂಭೀರ ಗಾಯಗಳಾಗಿವೆ.
ಸಲಾಸರ್ದಿಂದ ಪ್ರಯಾಣಿಕರನ್ನು ಹೊತ್ತುಕೊಂಡು ಬರುತ್ತಿದ್ದ ಬಸ್ ಸಿಕಾರ್ ಜಿಲ್ಲೆಯ ಲಕ್ಷ್ಮೀಗರ್ ಸಮೀಪದಲ್ಲಿ ಹೆದ್ದಾರಿಯ ಸೇತುವೆ ಗೊಡೆಗೆ ಗುದ್ದಿದೆ ಪರಿಣಾಮವಾಗಿ 12 ಜನ ಪ್ರಯಾಣಿಕರು ಸಾವನ್ನಪ್ಪಿದ್ದಾರೆ.
ಗಂಭೀರವಾಗಿ ಗಾಯಗೊಂಡಿರುವವರಲ್ಲಿ ಅನೇಕರ ಆರೋಗ್ಯದ ಸ್ಥಿತಿ ಚಿಂತಾಜನಕವಾಗಿದೆ. ಗಾಯಾಳುಗಳನ್ನು ಲಕ್ಷ್ಮೀನಗರದ ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದು ಚಿಕಿತ್ಸೆಯನ್ನು ನೀಡಲಾಗುತ್ತಿದೆ