newsics.com
ನ್ಯೂಸಿಕ್ಸ್.ಕಾಮ್
ಇಂದಿನ ರಾಶಿ ಭವಿಷ್ಯ
29-10-2024, ಮಂಗಳವಾರ
ಮೇಷ
ನಿಮ್ಮ ಸತತ ಪ್ರಯತ್ನ ಹಾಗೂ ಕುಟುಂಬದ ಸದಸ್ಯರ ಸಕಾಲಿಕ ಬೆಂಬಲ ಬಯಸಿದ ಫಲಿತಾಂಶಗಳು ಸಿಗಲಿವೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಅನಿವಾರ್ಯ ಕಾರಣಗಳಿಂದ ಖರ್ಚು ಹೆಚ್ಚಲಿದೆ. ಉದ್ಯೋಗಿಗಳಿಗೆ ಕೊಂಚ ಕೆಲಸದ ನಿರಾಳತೆ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 2
ವೃಷಭ
ಕುಟುಂಬ ಸದಸ್ಯರೊಂದಿಗೆ ತಾಳ್ಮೆಯಿಂದ ವರ್ತಿಸಿ, ಅಚಾತುರ್ಯದಿಂದ ಆಡಿದ ಮಾತುಗಳು ಅಪಾಯ ತರುವ ಸಾಧ್ಯತೆ ಇದೆ ಎಚ್ಚರಿಕೆ ಇರಲಿ. ದೀರ್ಘಕಾಲದ ಅನಾರೋಗ್ಯದಿಂದ ಮುಕ್ತಿ ಸಿಗಲಿದೆ. ಆರ್ಥಿಕ ಸ್ಥಿತಿಯಲ್ಲಿ ಸುಧಾರಣೆ ಕಂಡು ಬರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 2
ಮಿಥುನ
ಯಾರಾದರೂ ನಿಮ್ಮ ಸಹಾಯ ಬೇಡಿ ಬರುವರು, ವಿಮರ್ಶಿಸಿ ಸಹಾಯ ಮಾಡಿ. ಆರ್ಥಿಕ ಪ್ರಗತಿ ದಿನದ ಮಟ್ಟಿಗೆ ಸಾಧಾರಣವಾಗಿರಲಿದೆ. ಯಾರಾದರೂ ನಿಮ್ಮ ಭಾವನೆಗಳನ್ನು ನಿರಾಸೆ ಮಾಡುವ ಸಾಧ್ಯತೆ ಇದೆ, ಅವರ ಮಾತನ್ನು ಲಕ್ಷಿಸದೆ ಕಾರ್ಯದಲ್ಲಿ ಮುನ್ನುಗ್ಗಿ. ಆರೋಗ್ಯದ ಕುರಿತು ಕಾಳಜಿ ವಹಿಸಿ. ಉದ್ಯೋಗಿಗಳಿಗೆ ಹೊಸ ಭರವಸೆಯ ಆಶಾಭಾವನೆ ಮೂಡಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 2
ಕರ್ಕಾಟಕ
ಸಂಗಾತಿಯೊಂದಿಗೆ ಮುಖ್ಯ ವಿಷಯಗಳ ಕುರಿತು ಚರ್ಚೆ ಮಾಡುವಿರಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಅನಿವಾರ್ಯ ಕಾರಣಗಳಿಂದ ಖರ್ಚು ಇರಲಿದೆ. ಅತಿಯಾದ ಕೆಲಸದ ಒತ್ತಡದಿಂದ ದೈಹಿಕವಾಗಿ ಬಳಲುವ ಸಾಧ್ಯತೆ ಇದೆ. ಅಮೂಲ್ಯ ವಸ್ತುಗಳ ಬಗೆಗೆ ಜಾಗೃತಿ ಇರಲಿ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 3
ಸಿಂಹ
ದಿನದ ಮಟ್ಟಿಗೆ ಆರೋಗ್ಯದಲ್ಲಿ ವ್ಯತ್ಯಾಸ ಆಗುವ ಸಾಧ್ಯತೆ ಇದ್ದು, ಎಚ್ಚರಿಕೆ ಇರಲಿ. ವಿಶ್ವಾಸದಿಂದ ಕಾರ್ಯ ಸಿದ್ದಿ. ಲಾಭದ ಹೂಡಿಕೆ ಕುರಿತಾಗಿ ಆಲೋಚನೆ ಮಾಡುವಿರಿ. ಕುಟುಂಬದ ಜತೆಗೆ ಕಾಲ ಕಳೆಯಲು ಹೆಚ್ಚು ಸಮಯ ವಿನಿಯೋಗಿಸುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 9
ಕನ್ಯಾ
ನಿಮ್ಮ ಕ್ರಿಯಾಶೀಲ ಕಾರ್ಯ ಯೋಜನೆ ಸಫಲತೆಯನ್ನು ತಂದು ಕೊಡಲಿದೆ. ಆಪ್ತರು ನಿಮ್ಮ ಸಹನೆಯನ್ನು ಪರೀಕ್ಷಿಸುವ ಸಾಧ್ಯತೆ ಇದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಆರ್ಥಿಕವಾಗಿ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 9
ತುಲಾ
ಆರೋಗ್ಯ ಪರಿಪೂರ್ಣವಾಗಿರಲಿದೆ ಅದರ ಹೊರತಾಗಿಯೂ ಅನೇಕ ವಿಷಯಗಳು ನಿಮಗೆ ಒತ್ತಡ ಉಂಟುಮಾಡುವ ಸಾಧ್ಯತೆ ಇದೆ. ಖರ್ಚು ಹೆಚ್ಚಾಗುವ ಸಾಧ್ಯತೆ ಇದೆ. ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ. ಜಂಟಿ ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಕುಟುಂಬದ ಅಸಹಕಾರದಿಂದ ಕಿರಿಕಿರಿ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 2
ವೃಶ್ಚಿಕ
ಬಿಡುವಿಲ್ಲದ ಕಾರ್ಯದಿಂದ ಆಯಾಸ, ಇದರಿಂದಾಗಿ ಮಾನಸಿಕವಾಗಿ ಒತ್ತಡಕ್ಕೆ ಒಳಗಾಗುವ ಸಾಧ್ಯತೆ ಆದಷ್ಟು ವಿಶ್ರಾಂತಿ ಪಡೆಯಿರಿ. ಅನಗತ್ಯ ಖರ್ಚು ಇರಲಿದೆ. ಹಿರಿಯರಿಂದ ಮಾರ್ಗದರ್ಶನ ಸಿಗಲಿದೆ. ಕೌಟುಂಬಿಕವಾಗಿ ಮಿಶ್ರಫಲ. ಅದೃಷ್ಟ ಸಂಖ್ಯೆ: 4
ಧನುಸ್ಸು
ಸಂತೋಷ ತುಂಬಿದ ವಾತಾವರಣ ಇರಲಿದೆ. ಮಕ್ಕಳಿಗಾಗಿ ಖರ್ಚು ಮಾಡುವ ಸಾಧ್ಯತೆ ಇದೆ. ಸಂಗಾತಿಯ ಆರೋಗ್ಯದ ಕುರಿತು ಕಾಳಜಿ ಇರಲಿ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 1
ಮಕರ
ಆತ್ಮವಿಶ್ವಾಸದಿಂದ ಕಾರ್ಯದಲ್ಲಿ ಯಶಸ್ಸು ಸಿಗಲಿದೆ. ಈ ದಿನ ಹಣಕಾಸು ಪರಿಸ್ಥಿತಿಗಳು ಸುಧಾರಿಸುತ್ತವೆ. ನಿಮ್ಮಲ್ಲಿರುವ ನಾಯಕತ್ವ ಗುಣವನ್ನು ಗುರುತಿಸುವ ಸಾಧ್ಯತೆ ಇದೆ. ಉದ್ಯೋಗದ ಸ್ಥಳದಲ್ಲಿ ಪ್ರಶಂಸೆ ಸಿಗಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 1
ಕುಂಭ
ಇಂದು ಕೈಗೊಂಡ ಧರ್ಮಾರ್ಥ ಕಾರ್ಯವು ಮಾನಸಿಕ ಶಾಂತಿ ಮತ್ತು ಆರಾಮ ತರುತ್ತದೆ. ಹಣಕಾಸು ವ್ಯವಹಾರ ಖಂಡಿತವಾಗಿಯೂ ವೃದ್ಧಿಯಾಗುತ್ತದೆ- ಆದರೆ ಅದೇ ಸಮಯದಲ್ಲಿ ಖರ್ಚು ತುಂಬಾ ಹೆಚ್ಚಾಗುತ್ತದೆ. ನಿಮ್ಮ ಬಗೆಗೆ ಕಾಳಜಿ ಮಾಡುವವರ ಬಗ್ಗೆ ಉದಾಸೀನತೆ ಬೇಡ. ದೀರ್ಘಕಾಲದ ಪ್ರಯತ್ನಕ್ಕೆ ಯಶಸ್ಸು ಕಟ್ಟಿಟ್ಟ ಬುತ್ತಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 8
ಮೀನ
ವಿನಾಕಾರಣ ವಿಚಾರ ಮಾಡಿ ಆರೋಗ್ಯವನ್ನು ಹಾಳು ಮಾಡಿಕೊಳ್ಳುವುದು ಬೇಡ. ಅನಗತ್ಯವಾಗಿ ಹಣವನ್ನು ಖರ್ಚು ಮಾಡುವ ಸಾಧ್ಯತೆ ಇದೆ. ಸಂಗಾತಿಯ ಸಲಹೆ ಹಿತಕರವೆನಿಸುವುದು. ಆತ್ಮೀಯರೊಂದಿಗೆ ಕಾಲ ಕಳೆಯುವ ಸಾಧ್ಯತೆ ಇದೆ. ದಿನದ ಮಟ್ಟಿಗೆ ಆರೋಗ್ಯ ಹದಗೆಡುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 6
ಶುಭೋದಯ… ಇಂದಿನ ಪಂಚಾಂಗ, ಆಶ್ವಯುಜ ಕೃಷ್ಣ ಪಕ್ಷ ದ್ವಾದಶೀ, 29-10-2024, ಮಂಗಳವಾರ