newsics.com
ಬೆಂಗಳೂರು: ರೈತರ ಜಮೀನು ವಕ್ಫ್ ಬೋರ್ಡ್ಗೆ ವರ್ಗಾವಣೆ ವಿವಾದ ಭಾರಿ ಚರ್ಚೆಗೆ ಕಾರಣವಾದ ಬೆನ್ನಲ್ಲೇ, ರೈತರಿಗೆ ವಕ್ಫ್ ಬೋರ್ಡ್ನಿಂದ ನೀಡಿರುವ ನೋಟಿಸ್ ವಾಪಸ್ ಪಡೆಯುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಮಂಗಳವಾರ ವಿಧಾನಸೌಧದಲ್ಲಿ ಮಾತನಾಡಿದ ಅವರು, ವಿಜಯಪುರದ ಹೊನವಾಡ ಗ್ರಾಮದಲ್ಲಿ ರೈತರ ಜಮೀನಿಗೆ ವಕ್ಫ್ ಬೋರ್ಡ್ ನೀಡಿರುವ ನೋಟಿಸ್ ಹಿಂಪಡೆಯುತ್ತೇವೆ. ಹೀಗಾಗಿ ರೈತರು ಆತಂಕಪಡುವ ಅಗತ್ಯವಿಲ್ಲ ಎಂದರು.
ಯಾವುದೇ ರೈತರನ್ನು ಸರ್ಕಾರ ಒಕ್ಕಲೆಬ್ಬಿಸುವುದಿಲ್ಲ. ಈಗಾಗಲೇ ಮೂವರು ಸಚಿವರು ಸುದ್ದಿಗೋಷ್ಠಿ ನಡೆಸಿ ಸ್ಪಷ್ಟಪಡಿಸಿದ್ದಾರೆ. ಒಂದು ವೇಳೆ ವಿಜಯಪುರದಲ್ಲಿ ರೈತರಿಗೆ ನೋಟಿಸ್ ಕೊಟ್ಟಿದ್ದರೆ ಅದನ್ನು ಹಿಂಪಡೆಯಲಾಗುವುದು ಎಂದರು.
ಯಾದಗಿರಿ ಹಾಗೂ ಧಾರವಾಡ ಜಿಲ್ಲೆಗಳಲ್ಲಿಯೂ ರೈತರ ಜಮೀನಿಗೆ ವಕ್ಫ್ ಆಸ್ತಿ ಎಂದು ನೋಟಿಸ್ ನೀಡಿರುವ ವಿಚಾರವಾಗಿ, ಈ ಬಗ್ಗೆ ಪರಿಶೀಲಿಸಲಾಗುವುದು. ಕಂದಾಯ ಸಚಿವರಿಗೆ ಪರಿಶೀಲನೆ ನಡೆಸುವಂತೆ ಸೂಚಿಸಿದ್ದೇನೆ ಎಂದು ಹೇಳಿದರು.
ಹಬ್ಬದ ಎಫೆಕ್ಟ್.. ಆಭರಣ ಪ್ರಿಯರಿಗೆ ಬಿಗ್ಶಾಕ್.. ಭರ್ಜರಿ ಏರಿಕೆಯಾದ ಚಿನ್ನದ ಬೆಲೆ!
ನಮ್ಮ ಕಂಗಳ ಬಿಸಿಯ ಹನಿಗಳು ನೂರು ಬಾರಿ ಕೂಗಿವೆ: ಅಪ್ಪು ಕುರಿತು ಅನುಶ್ರೀ ಭಾವುಕ ಪೋಸ್ಟ್
ನಾಳೆ ದರ್ಶನ್ಗೆ ಮಧ್ಯಂತರ ಜಾಮೀನು ಸಿಗುತ್ತಾ? ಚಿಕಿತ್ಸೆ ನೀಡದಿದ್ದರೆ ಕಾಲುಗಳು ಸ್ಪರ್ಶ ಕಳೆದುಕೊಳ್ಳುವ ಸಾಧ್ಯತೆ!