newsics.com
ಬಳ್ಳಾರಿ: ಒಟ್ಟೂ 131 ದಿನಗಳ ಬಳಿಕ ಮಧ್ಯಂತರ ಜಾಮೀನಿನ ಮೇಲೆ ನಟ ದರ್ಶನ್ ತೂಗುದೀಪ ಜೈಲ್ನಿಂದ ಹೊರಬಂದಿದ್ದಾರೆ.
69 ದಿನಗಳ ಬಳಿಕ ಬಳ್ಳಾರಿ ಜೈಲಿನಿಂದ ಹೊರಗೆ ಬರುವಾಗ ಕುಂಟುತ್ತಾ ಹೊರಗೆ ಬಂದಿದ್ದಾರೆ. ಇನ್ನು ನಟ ದರ್ಶನ್ ಕರೆದೊಯ್ಯಲು ಅವರ ಪತ್ನಿ ವಿಜಯಲಕ್ಷ್ಮೀ ದರ್ಶನ್ ಬಳ್ಳಾರಿ ಜೈಲಿನ ಬಳಿ ಕಾಯುತ್ತಿದ್ದರುಮ
ನಟ ದರ್ಶನ್ ಅವರಿಗೆ ಬುಧವಾರ ಬೆಳಗ್ಗೆ ಹೈಕೋರ್ಟ್ನಿಂದ ಜಾಮೀನು ಮಂಜೂರು ಮಾಡಿತ್ತು. ನಟ ದರ್ಶನ್ ಬೆನ್ನು ನೋವಿನಿಂದ ಬಳಲುತ್ತಿದ್ದ ಹಿನ್ನೆಲೆಯಲ್ಲಿ ಶಸ್ತ್ರಚಿಕಿತ್ಸೆಯನ್ನು ಮಾಡಿಸಿಕೊಳ್ಳಲು 6 ವಾರಗಳ ಕಾಲ ಜಾಮೀನು ಮಂಜೂರು ಮಾಡಲಾಗಿತ್ತು. ಆದರೆ, ಜಾಮೀನು ಪಡೆಯುವುದಕ್ಕೆ ಮುನ್ನ 7 ಷರತ್ತುಗಳನ್ನು ಹಾಕಲಾಗಿತ್ತು. ದರ್ಶನ್ ಜಾಮೀನು ಪ್ರಕ್ರಿಯೆಯನ್ನು ಮಧ್ಯಾಹ್ನದೊಳಗೆ ಪೂರ್ಣಗೊಳಿಸಿದ ನಂತರ ಕೋರ್ಟ್ ಜಾಮೀನು ಆದೇಶವನ್ನು ಬಳ್ಳಾರಿ ಸೆಂಟ್ರಲ್ ಜೈಲಿಗೆ ಮಧ್ಯಾಹ್ನ 4 ಗಂಟೆ ಸುಮಾರಿಗೆ ಕಳುಹಿಸಲಾಗಿತ್ತು. ಇದರ ಬೆನ್ನಲ್ಲಿಯೇ ಸಂಜೆ 5.30ರ ವೇಳೆ ನಟ ದರ್ಶನ್ ಅವರನ್ನು ಜೈಲಿನಿಂದ ಬಿಡುಗಡೆ ಮಾಡಲಾಗಿದೆ.
ಜೈಲಿನಿಂದ ಹೊರಗೆ ಬರುವಾಗ ಕುಂಟುತ್ತಾ ಬಂದಿದ್ದು, ಬೆನ್ನು ನೋವು ತೀವ್ರವಾಗಿ ಉಲ್ಬಣಗೊಂಡಿದೆ ಎಂಬ ಲಕ್ಷಣಗಳು ಗೋಚರಿಸಿವೆ.
ದರ್ಶನ್ ಒಂದು ವಾರದೊಳಗೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವುದರ ಬಗ್ಗೆ ಕೋರ್ಟ್ಗೆ ಮಾಹಿತಿ ನೀಡುವಂತೆ ಸೂಚಿಸಲಾಗಿದೆ. ಇನ್ನು ಬೆಂಗಳೂರಿನಲ್ಲಿಯೇ ಚಿಕಿತ್ಸೆ ಪಡೆಯುವುದಕ್ಕೆ ಸೂಚಿಸಲಾಗಿದೆ.
ದರ್ಶನ್ ಕರೆದುಕೊಂಡು ಹೋಗಲು ಸೆಂಟ್ರಲ್ ಜೈಲಿನ ಬಳಿ ಇರುವ ಕನಕದುರ್ಗಮ್ಮ ದೇವಸ್ಥಾನದ ಬಳಿ ಕಾರುಗಳನ್ನು ನಿಲ್ಲಿಸಲಾಗಿದೆ. ಇನ್ನು ದರ್ಶನ್ ಬಿಡುಗಡೆಯಾಗಿ ಹೊರಗೆ ಬರುತ್ತಿದ್ದಂತೆ ಅವರನ್ನು ನೋಡಲು ನೂರಾರು ಅಭಿಮಾನಿಗಳು ಜಮಾವಣೆಗೊಂಡಿದ್ದಾರೆ.
ಈ ಹಿನ್ನೆಲೆಯಲ್ಲಿ ಗಲಾಟೆ, ನೂಕಾಟ ಸಂಭವಿಸಬಹುದು ಎಂಬ ಮುನ್ನೆಚ್ಚರಿಕೆಯಿಂದ ಹೆಚ್ಚುವರಿ ಪೊಲೀಸ್ ಭದ್ರತೆ ನಿಯೋಜನೆ ಮಾಡಲಾಗಿದೆ. ನಟ ದರ್ಶನ್ ಅವರು ಕಾರಿನಲ್ಲಿ ಬಳ್ಳಾರಿ, ಹಗರಿ, ಚೆಳ್ಳಗುರ್ಕಿ, ಅನಂತಪುರ ಮಾರ್ಗವಾಗಿ ಬೆಂಗಳೂರಿಗೆ ಪ್ರಯಾಣಿಸಲಿದ್ದಾರೆ ಎಂದು ತಿಳಿದುಬಂದಿದೆ.
ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆ ಮಾರ್ಪಾಡಿಗೆ ಸರ್ಕಾರ ನಿರ್ಧಾರ: ಡಿಸಿಎಂ ಡಿಕೆ ಸುಳಿವು
ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ: ಯಾರ್ಯಾರಿಗೆ ಪುರಸ್ಕಾರ? ಇಲ್ಲಿದೆ ಪ್ರಶಸ್ತಿ ಪುರಸ್ಕೃತರ ಪೂರ್ಣ ಪಟ್ಟಿ