newsics.com
ಬೆಂಗಳೂರು : ಉಪ ಮುಖ್ಯಮಂತ್ರಿ ಹಾಗೂ ಶಾಸಕರ ನಡುವಿನ ಕದನ ವೈಯಕ್ತಿಕ ಮಟ್ಟಕ್ಕೂ ಬಂದು ಮುಟ್ಟುವಂತೆ ಕಾಣುತ್ತಿದ್ದು, ಇದೀಗ ಡಿಕೆ ಶಿವಕುಮಾರ್ ಮತ್ತು ಬಿಜೆಪಿ ಶಾಸಕ ನಡುವಿನ ಅನುದಾನ ಕದನ ರಾಜಭವನ ತಲುಪಿದೆ.
ಬೆಂಗಳೂರಿನ ಜಯನಗರ ಕ್ಷೇತ್ರಕ್ಕೆ ಅನುದಾನ ಹಂಚಿಕೆ ಮಾಡದ ವಿಚಾರ ತೀವ್ರ ಸ್ವರೂಪ ಪಡೆದುಕೊಂಡಿದೆ. ನಾನೇ ಜಯನಗರ ಕ್ಷೇತ್ರವನ್ನು ಹೊರತುಪಡಿಸಿ ಬೆಂಗಳೂರಿನ ಎಲ್ಲಾ ವಿಧಾನಸಭಾ ಕ್ಷೇತ್ರಗಳಿಗೆ ಅನುದಾನ ಬಿಡುಗಡೆಗೆ ಆದೇಶಿಸಿದ್ದೇನೆ ಎಂದಿದ್ದಾರೆ.ಬಿಜೆಪಿ ನಾಯಕರ ಆಕ್ರೋಶಕ್ಕೆ ಕಾರಣವಾಗಿದ್ದು, ಈ ಬಗ್ಗೆ ವಿಪಕ್ಷ ನಾಯಕ ಆರ್ ಅಶೋಕ್, ಡಿಕೆ ಶಿವಕುಮಾರ್ಗೆ ಪತ್ರ ಬರೆದಿದ್ದಾರೆ. ಇದರ ಬೆನ್ನಲ್ಲೇ ಇದೇ ವಿಚಾರ ಇಟ್ಟುಕೊಂಡು ಡಿಕೆಶಿ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಲಾಗಿದೆ.
ವಕೀಲ ಹೆಚ್.ಯೋಗೇಂದ್ರ ಎನ್ನುವರು ಡಿಕೆ ಶಿವಕುಮಾರ್ ವಿರುದ್ಧ ಇಂದು (ಅಕ್ಟೋಬರ್ 30) ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್ ಅವರಿಗೆ ಲಿಖಿತ ದೂರು ನೀಡಿದ್ದಾರೆ.
ಬೆಂಗಳೂರು ಅಭಿವೃದ್ಧಿ ಖಾತೆ ಸಚಿವರ ವಿವೇಚನಾ ಕೋಟಾದಡಿ ಅನುದಾನ ಹಂಚಿಕೆ ಮಾಡದೇ ಪ್ರಮಾಣವಚನದ ಉದ್ದೇಶ ಉಲ್ಲಂಘಿಸಿದ್ದಾರೆ. ಉಪಮುಖ್ಯಮಂತ್ರಿ ಆಗುವ ವೇಳೆ ಸ್ವೀಕರಿಸಿದ್ದ ಪ್ರಮಾಣ ವಚನವನ್ನು ಉಲ್ಲಂಘಿಸಿದ್ದಾರೆ ಎಂದು ವಕೀಲ ಹೆಚ್.ಯೋಗೇಂದ್ರ ಅವರು ಡಿಕೆಶಿ ವಿರುದ್ಧ ದೂರು ನೀಡಿದ್ದಾರೆ.