newsics.com
ಬೆಂಗಳೂರು: ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡುವ ಶಕ್ತಿ ಯೋಜನೆ ಪರಿಷ್ಕರಣೆಗೆ ಸರ್ಕಾರ ನಿರ್ಧರಿಸಿದೆ.
ಈ ಬಗ್ಗೆ ಖುದ್ದು ಡಿಸಿಎಂ ಡಿಕೆ ಶಿವಕುಮಾರ್ ಸುಳಿವು ನೀಡಿದ್ದಾರೆ. ವಿಧಾನಸೌಧದ ಗ್ರ‍್ಯಾಂಡ್ ಮೆಟ್ಟಿಲು ಮೇಲೆ ಬುಧವಾರ ನಡೆದ ಐರಾವತ ಕ್ಲಬ್ ಕ್ಲಾಸ್ 2.0 ಬಸ್ ಉದ್ಘಾಟನೆ ವೇಳೆ ಮಾತನಾಡಿದ ಡಿಸಿಎಂ, ಅನೇಕರು ನನಗೆ ಮೇಲ್, ಮೆಸೇಜ್ ಮಾಡಿ ನಾವು ಟಿಕೆಟ್‌ಗೆ ಹಣ ಕೊಡುವುದಕ್ಕೆ ಸಿದ್ದವಾಗಿದ್ದೇವೆ. ನಮಗೆ ಉಚಿತ ಪ್ರಯಾಣ ಬೇಡ ಎಂದಿದ್ದಾರೆ. ನಾವು ಟಿಕೆಟ್‌ಗೆ ದುಡ್ಡು ಕೊಡುತ್ತೇವೆ. ಆದರೆ ಬಸ್‌ನಲ್ಲಿ ಹಣ ತೆಗೆದುಕೊಳ್ಳುತ್ತಿಲ್ಲ ಎಂದು ಹೇಳುತ್ತಿದ್ದಾರೆ.
ಅನೇಕರು ನಾವು ಟಿಕೆಟ್ ಹಣ ಕೊಡುವುದಕ್ಕೆ ಸಿದ್ಧ ಎಂದು ಪ್ರಾಮಾಣಿಕವಾಗಿ ಅಭಿಪ್ರಾಯ ಹೇಳುತ್ತಿದ್ದಾರೆ. ಹೀಗಾಗಿ ನಾವು, ರಾಮಲಿಂಗಾರೆಡ್ಡಿ, ಸರ್ಕಾರದಲ್ಲಿ ಎಲ್ಲಾ ಕುಳಿತು ಈ ಬಗ್ಗೆ ಚರ್ಚೆ ಮಾಡಿ, ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು.
ಗ್ಯಾರಂಟಿ ಯೋಜನೆಗಳಿಂದ ಆರ್ಥಿಕ ನಷ್ಟ ಅನುಭವಿಸುತ್ತಿರುವ ಸರ್ಕಾರ, ಇದೀಗ ಗ್ಯಾರಂಟಿ ಯೋಜನೆಗಳ ಪರಿಷ್ಕರಣೆಗೆ ಮುಂದಾಗುವ ಸುಳಿವು ಕೊಟ್ಟಿದೆ.
ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ: ಯಾರ‌್ಯಾರಿಗೆ ಪುರಸ್ಕಾರ? ಇಲ್ಲಿದೆ ಪ್ರಶಸ್ತಿ ಪುರಸ್ಕೃತರ ಪೂರ್ಣ ಪಟ್ಟಿ