newsics.com
ಬೆಂಗಳೂರು: ರಾಜ್ಯದ ಶಿಗ್ಗಾಂವಿ, ಸಂಡೂರು ಮತ್ತು ಚನ್ನಪಟ್ಟಣ ಕ್ಷೇತ್ರಗಳಿಗೆ ನವೆಂಬರ್ 13ರಂದು ಉಪಚುನಾವಣೆ ನಡೆಯಲಿದೆ. ಈ ಹಿನ್ನೆಲೆ ಭರ್ಜರಿ ಪ್ರಚಾರ ನಡೆಸಲು ಜೆಡಿಎಸ್ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದೆ.
40 ಜನರ ಸ್ಟಾರ್ ಪ್ರಚಾರಕ ಪಟ್ಟಿಯನ್ನು ಕೇಂದ್ರ ಸಚಿವರು ಜೆಡಿಎಸ್ ರಾಜ್ಯಾಧ್ಯಕ್ಷರೂ ಆದ ಹೆಚ್.ಡಿ ಕುಮಾರಸ್ವಾಮಿ ಬಿಡುಗಡೆ ಮಾಡಿದ್ದು, ಚುನಾವಣಾ ಆಯೋಗಕ್ಕೂ ಪಟ್ಟಿಯನ್ನ ರವಾನೆ ಮಾಡಿದ್ದಾರೆ. ಆದ್ರೆ ಸ್ಟಾರ್ ಪ್ರಚಾರಕರ ಪಟ್ಟಿಯಿಂದ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ ದೇವೇಗೌಡ ಅವರಿಗೆ ಕೊಕ್ ನೀಡಲಾಗಿದೆ.
ಪಟ್ಟಿಯಲ್ಲಿ ಜಿ.ಟಿ ದೇವೇಗೌಡರನ್ನು ಕೈಬಿಟ್ಟು, ಪುತ್ರ ಜಿ.ಡಿ ಹರೀಶ್ ಗೌಡಗೆ ಪಟ್ಟಿಯಲ್ಲಿ ಸ್ಥಾನ ನೀಡಲಾಗಿದೆ. ಅಲ್ಲದೇ ಹೆಚ್.ಡಿ ರೇವಣ್ಣ, ಮಾಜಿ, ಹಾಲಿ ಸಂಸದರು ಸೇರಿ 40 ಜನ ಪಟ್ಟಿಯಲ್ಲಿದ್ದಾರೆ