newsics.com
ಬೆಂಗಳೂರು: ಹಿರಿಯ ರಾಜಕಾರಣಿ ಎಸ್ಎಂ ಕೃಷ್ಣ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನಿಡಬೇಕೆಂದು ಸರ್ಕಾರಕ್ಕೆ ಮನವಿ ಮಾಡಲಾಗಿದೆ.

ಗ್ಯಾರಂಟಿ ಯೋಜನೆ ಪ್ರಾಧಿಕಾರದ ಉಪಾಧ್ಯಕ್ಷರಾದ ಸ್ಟಾರ್ ಚಂದ್ರು ಅವರು ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ. ಇದಕ್ಕೆ ಸ್ಪಂದಿಸಿರುವ ಸಚಿವ ಶಿವರಾಜ್ ತಂಗಡಗಿ, ಕಡತ ಮಂಡಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯದರ್ಶಿಗೆ ಸೂಚಿಸಿದ್ದಾರೆ.

ಎಸ್. ಕೃಷ್ಣ ಅವರು ನಾಡಿನ ಹಿರಿಯ ರಾಜಕೀಯ ನಾಯಕರು ನಾಲ್ಕು ಸದನಗಳನ್ನು ಪ್ರತಿನಿಧಿಸಿ ಹಲವು ಸಾಂವಿಧಾನಿಕ ಹುದ್ದೆಗಳನ್ನು ಅಲಂಕರಿಸಿ ಸರ್ವ ಹುದ್ದೆಗಳಿಗೂ ಭೂಷಣರಾಗಿ ದೇಶಕ್ಕೆ ಅದರಲ್ಲೂ ಕನ್ನಡ ನಾಡಿಗೆ ಹೆಮ್ಮೆಯ ಕಳಶ ಪ್ರಾಯರಾಗಿದ್ದಾರೆ. ಹೀಗಾಗಿ ಕರ್ನಾಟಕ ರಾಜ್ಯ ನಾಮಾಂಕಿತವಾಗಿ ಐವತ್ತು ವಸಂತಗಳನ್ನು ಪೂರೈಸಿ ಸುವರ್ಣ ಸಂಭ್ರಮದಲ್ಲಿರುವ ಶುಭ ಸಂದರ್ಭದಲ್ಲಿ ಎಸ್.ಎಂ. ಕೃಷ್ಣ ಅವರಿಗೆ ರಾಜ್ಯದ ಅತ್ಯುನ್ನತ ಗೌರವವಾದ ಕರ್ನಾಟಕ ರತ್ನ ಪ್ರಶಸ್ತಿ ನೀಡುವ ಮೂಲಕ ರಾಜ್ಯದ ಜನರ ಪರವಾಗಿ ಗೌರವಿಸುವಂತೆ ಕೋರಿದ್ದಾರೆ.