newsics.com
ಬೆಂಗಳೂರು : ಭಾರತದ ಖ್ಯಾತ ಕನ್ಸೂಮರ್ ಬ್ರ್ಯಾಂಡ್ ಎನಿಸಿದ್ದ ಬಿಪಿಎಲ್ನ ಸಂಸ್ಥಾಪಕ ಟಿ.ಪಿ. ಗೋಪಾಲನ್ ನಂಬಿಯಾರ್ ನಿಧನರಾಗಿದ್ದಾರೆ.
ವಯೋಸಹಜ ಅನಾರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಅವರಿಗೆ 94 ವರ್ಷ ವಯಸ್ಸಾಗಿತ್ತು. ಬೆಂಗಳೂರಿನಲ್ಲಿರುವ ತಮ್ಮ ಸ್ವಗೃಹದಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ. ಮಾಜಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅವರಿಗೆ ಟಿಪಿಜಿ ಮಾವನಾಗಿದ್ದರು.
ಗೋಪಾಲನ್ ನಂಬಿಯಾರ್ ನಿಧನಕ್ಕೆ ಹಲವರು ಸಂತಾಪ ವ್ಯಕ್ತಪಡಿಸಿದ್ದಾರೆ. ಪಿಎಂ ನರೇಂದ್ರ ಮೋದಿ, ರಾಜೀವ್ ಚಂದ್ರಶೇಖರ್, ಕರ್ನಾಟಕದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮೊದಲಾದವರು ಸಂತಾಪ ಸೂಚಿಸಿದ್ದಾರೆ.