newsics.com
ಬೆಂಗಳೂರು : ಚನ್ನಪಟ್ಟಣ ಉಪಚುನಾವಣೆ ಹಿನ್ನೆಲೆ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಗೋಡೌನ್‌ನಲ್ಲಿ ಶೇಖರಿಸಿಟ್ಟಿದ್ದ ಬಂಡಲ್‌ಗಟ್ಟಲೇ ಸೀರೆ, ಪಂಚೆಗಳನ್ನು ಜಪ್ತಿ ಮಾಡಿದ್ದಾರೆ.
ಹೊಸದೊಡ್ಡಿ ಗ್ರಾಮದ ಬಳಿ ಇರುವ ಗೋಡೌನ್‌ನಲ್ಲಿ ಅಕ್ರಮವಾಗಿ ಸೀರೆ ಮತ್ತು ಪಂಚೆಗಳನ್ನು ಸಂಗ್ರಹಿಸಿ ಇಡಲಾಗಿತ್ತು. ಚನ್ನಪಟ್ಟಣ ಮತದಾರರಿಗೆ ಹಂಚಲು ಶೇಖರಿಸಿಟ್ಟಿರುವ ಶಂಕೆ ವ್ಯಕ್ತವಾಗಿದೆ. ಯಾವುದೇ ದಾಖಲೆ ಇಲ್ಲದೇ ಶೇಖರಿಸಿಟ್ಟಿದ್ದ ಲಕ್ಷಾಂತರ ಮೌಲ್ಯದ ಸೀರೆ ಮತ್ತು ಪಂಚೆಯನ್ನು ಚುನಾವಣಾಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಚುನಾವಣೆನೀತಿ ಸಂಹಿತೆ ಉಲ್ಲಂಘನೆ ಅಡಿ ದೂರು ದಾಖಲಿಸಲಾಗಿದೆ.