newsics.com
ಬೆಂಗಳೂರು: ಸಿಎಂ ಸಿದ್ದರಾಮಯ್ಯನವರ ಆದೇಶದ ಮೇರೆಗೇ ಎಲ್ಲಾ ಕಡೆ ವಕ್ಫ್ ಅದಾಲತ್ ಮಾಡಿದ್ದೇನೆ ಎಂದು ಸಚಿವ ಜಮೀರ್ ಅಹಮ್ಮದ್ ಖಾನ್ ಸ್ಪಷ್ಟಪಡಿಸಿದ್ದಾರೆ.
ಕರ್ನಾಟಕದಲ್ಲಿ ವಕ್ಫ್ ಬೋರ್ಡ್‌ನಿಂದ ಭೂ ಕಬಳಿಕೆ ಆರೋಪ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಈಗ ಇದಕ್ಕೆ ಇನ್ನೊಂದು ಟ್ವಿಸ್ಟ್ ಸಿಕ್ಕಿದೆ.
ರಾಜ್ಯದಲ್ಲಿ ಜಿಲ್ಲೆಯಿಂದ ಜಿಲ್ಲೆಗೆ ವ್ಯಾಪಿಸುತ್ತಿದ್ದು, ಇದಕ್ಕೆ ರೈತರು ರಸ್ತೆಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಇದಕ್ಕೆ ವಿಪಕ್ಷ ಬಿಜೆಪಿ ಸಹ ಸಾಥ್ ನೀಡಿದ್ದು, ವಕ್ಫ್ ಬೋರ್ಡ್ ಸಚಿವ ಜಮೀರ್ ಅಹಮ್ಮದ್ ಖಾನ್ ವಿರುದ್ಧ ಮುಗಿಬಿದ್ದಿದೆ. ವಕ್ಫ್ ಬೋರ್ಡ್ ಅದಾಲತ್ ನಡೆಸಿದ್ದಕ್ಕೆ ಈ ಸಮಸ್ಯೆಯಾಗಿದೆ. ಹೀಗಾಗಿ ಅದಾಲತ್ ಕೈಬಿಡುವಂತೆ ಬಿಜೆಪಿ ಆಗ್ರಹಿಸಿದೆ.
ಇದಕ್ಕೆ ಪ್ರತಿಕ್ರಿಯೆಯಾಗಿ ಇದೀಗ ಸಚಿವ ಜಮೀರ್ ಅಹಮ್ಮದ್ ಖಾನ್ ಸಿಎಂ ಸಿದ್ದರಾಮಯ್ಯನವರತ್ತ ಬೊಟ್ಟು ಮಾಡಿದ್ದಾರೆ.
ವಕ್ಫ್ ಆಸ್ತಿ ಒತ್ತುವರಿಯಾಗಿದೆ ಎಂದು ಸಿಎಂ ಸಿದ್ದರಾಮಯ್ಯನವರ ಬಳಿ ಹೇಳಿದ್ದೆ. ಆಗ ಅವರು ಎಲ್ಲೆಲ್ಲಿ ಒತ್ತುವರಿಯಾಗಿದೆಯೋ ಅಲ್ಲಿ ಅದಾಲತ್ ಮಾಡುವಂತೆ ಆದೇಶ ಮಾಡಿದ್ದರು. ಅದರಂತೆ ನಾನು ಮಾಡಿದ್ದೇನೆ ಎಂದು ಜಮೀರ್ ಅಹಮ್ಮದ್ ಖಾನ್ ತಿಳಿಸಿದ್ದಾರೆ.
ಜಮೀರ್ ಮಾತನಾಡಿರುವ ವಿಡಿಯೋವನ್ನು ಬಿಜೆಪಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು ಕಾಂಗ್ರೆಸ್ ಸರ್ಕಾರದ ವಿರುದ್ಧ ಮುಗಿಬಿದ್ದಿದೆ.
ಬಿಸಿ ಬಿಸಿ ಇಡ್ಲಿಯಲ್ಲಿ ಜಿರಳೆ ಪತ್ತೆ; ಹೋಟೆಲ್ ಬಗ್ಗೆ ಗ್ರಾಹಕರ ಆಕ್ರೋಶ
‘ಶಕ್ತಿ’ ಯೋಜನೆ ಮರುಪರಿಶೀಲನೆ ಹೇಳಿಕೆ: ಡಿಸಿಎಂ ಡಿಕೆಶಿಗೆ ವೇದಿಕೆಯಲ್ಲೇ ಖರ್ಗೆ ತರಾಟೆ
ಹಾಸನಾಂಬೆ ದರ್ಶನಕ್ಕೆ ಬಿಟ್ಟಿದ್ದ 300 ವಿಶೇಷ ಬಸ್ ಸಂಚಾರ ರದ್ದು! ಕಾರಣವೇನು ಗೊತ್ತಾ?
ದೇಶದ ಒಗ್ಗಟ್ಟು ಕಾಪಾಡಲು ಸೋನಿಯಾ, ರಾಹುಲ್ ಪ್ರಾಣ ಕೊಟ್ಟರು!: ಮಾತಿನ ಭರದಲ್ಲಿ ಖರ್ಗೆ ಭಾರೀ ಎಡವಟ್ಟು