newsics.com
ನವದೆಹಲಿ: ಬೆಳಕಿನ ಹಬ್ಬ ದೀಪಾವಳಿ ಹಬ್ಬದ ಸಂಭ್ರಮ ದೇಶದಾದ್ಯಂತ ಮನೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ದೇಶದ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ (ಟ್ವಿಟರ್)ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿಯವರು, ಎಲ್ಲರಿಗೂ ದೀಪಾವಳಿಯ ಶುಭಾಶಯಗಳು. ಈ ವಿಶೇಷ ಹಬ್ಬವು ಪ್ರತಿಯೊಬ್ಬರ ಜೀವನದಲ್ಲಿ ಸಂತೋಷ, ಆರೋಗ್ಯ ಮತ್ತು ಅದೃಷ್ಟ ವನ್ನು ತರಲಿ ಎಂದು ಹೇಳಿದ್ದಾರೆ.
ಮತ್ತೊಂದು ಟ್ವೀಟ್ ನಲ್ಲಿ ಭಾರತ ರತ್ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನ ಹಿನ್ನೆಲೆಯಲ್ಲಿ ನಮನಗಳನ್ನು ಸಲ್ಲಿಸಿದ್ದಾರೆ.