Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹಾವೇರಿಯಲ್ಲಿ ವಕ್ಫ್ ಗಲಾಟೆ: ಕಡಕೋಳ ಗ್ರಾಮದಲ್ಲಿ ಕಲ್ಲು ತೂರಾಟ, ಉದ್ವಿಗ್ನ ಸ್ಥಿತಿ, 32 ಮಂದಿ ಪೊಲೀಸ್ ವಶಕ್ಕೆ
ಕರ್ನಾಟಕಪ್ರಮುಖ

ಹಾವೇರಿಯಲ್ಲಿ ವಕ್ಫ್ ಗಲಾಟೆ: ಕಡಕೋಳ ಗ್ರಾಮದಲ್ಲಿ ಕಲ್ಲು ತೂರಾಟ, ಉದ್ವಿಗ್ನ ಸ್ಥಿತಿ, 32 ಮಂದಿ ಪೊಲೀಸ್ ವಶಕ್ಕೆ

Share
2 Min Read
SHARE

newsics.com

ಹಾವೇರಿ: ಜಿಲ್ಲೆಯ ಸವಣೂರು ತಾಲೂಕಿನ ಕಡಕೋಳ ಗ್ರಾಮದಲ್ಲಿ ವಕ್ಫ್ ಬೋರ್ಡ್ ಹೆಸರಿನಲ್ಲಿ ಖಾತೆ ನೋಂದಣಿಯಾಗಿರುವುದಕ್ಕೆ ತೀವ್ರ ವಿರೋಧ ವ್ಯಕ್ತವಾಗಿದ್ದು, ಕಲ್ಲು ತೂರಾಟ ನಡೆಸಲಾಗಿದೆ.

ತಾವು ವಾಸವಿದ್ದ ಮನೆಗಳನ್ನು ಖಾಲಿ‌ ಮಾಡಿಸಬಹುದು ಎಂಬ ಭೀತಿಯಿಂದ ಉದ್ರಿಕ್ತರ ಗುಂಪು ಮುಸ್ಲಿಂ ಮುಖಂಡರ ಮನೆಗಳ ಮೇಲೆ‌ ಕಲ್ಲು ತೂರಾಟ ನಡೆಸಿದೆ.

ಗ್ರಾಮದ ಕೆಲವರ ಮನೆ ಮೇಲೆ ಕಲ್ಲು ತೂರಾಟ ನಡೆದಿದೆ. ಗಲಾಟೆಯಲ್ಲಿ ಐವರಿಗೆ ಗಾಯಗಳಾಗಿವೆ. ಘಟನೆ ಸಂಬಂಧ ಪೊಲೀಸರು ಮೂವರು ಅಪ್ರಾಪ್ತರು ಸೇರಿದಂತೆ 32 ಜನರನ್ನು ವಶಕ್ಕೆ ಪಡೆದಿದ್ದಾರೆ.

ಮುಸ್ಲಿಂ ಮುಖಂಡ ಮೊಹಮ್ಮದ್ ರಫಿ ಎಂಬುವರ ಮನೆ ಮೇಲೆ ಉದ್ರಿಕ್ತರ ಗುಂಪು ಕಲ್ಲು ತೂರಾಟ ನಡೆಸಿದೆ. ಅಲ್ಲದೆ, ಮನೆ ಮುಂದಿದ್ದ ಬೈಕ್ ಜಖಂಗೊಳಿಸಲಾಗಿದೆ. ವಕ್ಸ್ ಹೆಸರಿಗೆ ಆಸ್ತಿ ಮನೆಗಳನ್ನು ವರ್ಗಾಯಿಸಿಕೊಂಡು ಖಾಲಿ ಮಾಡಿಸುತ್ತಾರೆ ಎಂಬ ವದಂತಿಯಿಂದ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.

ವಕ್ಫ್ ಸಚಿವ ಜಮೀರ್ ಅಹ್ಮದ್‌ ಖಾನ್ ಅವರು ಕಳೆದ ಸೆಪ್ಟೆಂಬರ್ 3 ರಂದು ಸಭೆ ನಡೆಸಿದರು. ಈ ವೇಳೆ ಕಡಕೋಳ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ವಕ್ಪ್ ಆಸ್ತಿಗಳನ್ನು ವಕ್ಪ್ ಸಂಸ್ಥೆ ಹೆಸರಿನಲ್ಲಿ ಖಾತೆಕರಣ ಮಾಡಬೇಕು. ವಕ್ಪ್ ಆಸ್ತಿಗೆ ಸೇರಿದ ಖಾತೆಗಳಲ್ಲಿ ವಕ್ಪ್ ಆಸ್ತಿ ಎಂದು ಲಾಕ್ ಮಾಡಲು ಪಿಡಿಒಗಳಿಗೆ ಆದೇಶ ನೀಡಿದ ಹಿನ್ನೆಲೆಯಲ್ಲಿ ಕಳೆದ ತಿಂಗಳು ಸೆಪ್ಟೆಂಬರ್ 27 ರಂದೇ ಜಿ.ಪಂ ಸಿಇಒ ಅಕ್ಷಯ್ ಶ್ರೀಧರ್ ಅವರಿಂದ ಸೂಚನೆ ನೀಡಲಾಗಿದೆ. ಈ ಹಿನ್ನಲೆಯಲ್ಲಿ ಸರ್ಕಾರದ ನಡೆಯಿಂದ ಜನರು ಆಕ್ರೋಶಗೊಂಡು ಗಲಾಟೆ ಮಾಡಿದ್ದಾರೆ ಎಂದು ಹೇಳಲಾಗಿದೆ.

ಪರಿಸ್ಥಿತಿ ಉದ್ವಿಗ್ನಗೊಂಡ ಬೆನ್ನಲ್ಲೇ ಮಾಹಿತಿ ತಿಳಿದು ರಾತ್ರೋರಾತ್ರಿ ಹಾವೇರಿ ಜಿಲ್ಲಾಧಿಕಾರಿ ವಿಜಯ್ ಮಹಾಂತೇಶ್ ಹಾಗೂ ಎಸ್ಪಿ ಅಂಶುಕುಮಾರ್ ಕಡಕೋಳ ಗ್ರಾಮಕ್ಕೆ ದೌಡಾಯಿಸಿದರು. ಮತ್ತೆ ಅಹಿತಕರ ಘಟನೆ ನಡೆಯದಂತೆ ಗ್ರಾಮಸ್ಥರ ಮನವೊಲಿಕೆಗೆ ಯತ್ನಿಸಿದರು. ಗಲಾಟೆಗೆ ಕಾರಣರಾದವರನ್ನು ಬಂಧಿಸಲು ಮುಂದಾದ ಪೊಲೀಸರು, ಗಲಾಟೆಗೆ ಪ್ರಚೋದನೆ ನೀಡಿದರನ್ನೂ ಪತ್ತೆ ಮಾಡಲು ಮುಂದಾಗಿದ್ದಾರೆ. ಸದ್ಯ ಸವಣೂರು ತಾಲೂಕಿನ ಕಡಕೋಳ ಗ್ರಾಮ ಬೂದಿಮುಚ್ಚಿದ ಕೆಂಡದಂತಿದೆ.

ವೈಯಕ್ತಿಕವಾಗಿ ಯಾರಿಗೂ ನಾವು ನೋಟಿಸ್ ಕೊಟ್ಟಿರಲಿಲ್ಲ. ಹಿಂದೆ ಇದ್ದ ಪಟ್ಟಿ ಮೇಲೆ ಮುಂದಿನ ಕ್ರಮಕ್ಕೆ ಪತ್ರ ಬರೆದಿದ್ದೆವು. ವಕ್ಫ್ ಆಸ್ತಿ ಎಂದು ಮನೆ ದಾಖಲೆಗಳಲ್ಲೂ ನಮೂದಿಸುತ್ತಾರೆಂದು ಜನ ಭಯಗೊಂಡಿದ್ದಾರೆ. ಆ ಭಯದಿಂದ ಗಲಾಟೆ ಮಾಡಿದ್ದಾರೆ. ಯಾರಿಗೂ ನೋಟಿಸ್ ಕೊಟ್ಟಿರಲಿಲ್ಲ, ಈಗ ಪರಿಸ್ಥಿತಿ ತಿಳಿಯಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಗಲಾಟೆಗೆ ಸಂಬಂಧಿಸಿದಂತೆ ದೂರು ಕೊಡಲು ಯಾರೂ ಸಿದ್ಧರಿಲ್ಲ. ಸ್ವಯಂಪ್ರೇರಿತ ದೂರು ದಾಖಲಿಸಿಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.

ಎಸ್‌ಪಿ ಅಂಶುಕಮಾರ್‌ ಮಾತನಾಡಿ, ಹಲ್ಲೆಗೊಳಗಾದವರಿಂದಲೂ ಮಾಹಿತಿ ಪಡೆದು ದೂರು ಸ್ವೀಕರಿಸುತ್ತೇವೆ. ಗಲಾಟೆಗೆ ಸಂಬಂಧಿಸಿದಂತೆ 15 ಜನರನ್ನು ವಶಕ್ಕೆ ಪಡೆದಿದ್ದೇವೆ. ಭದ್ರತೆಗೆ 4 ಕೆಎಸ್ಆರ್‌ಪಿ ತುಕಡಿ, 200 ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ ಎಂದು ತಿಳಿಸಿದರು.

TAGGED:32 people in police custodytense situationWaqf riot in Haveri: Stone pelting in Kadakola village
Share This Article
Facebook Twitter Copy Link Print
Previous Article ಹಬ್ಬದ ದಿನವೇ ದುರಂತ: ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಮೂವರ ದುರ್ಮರಣ
Next Article ‘ಹಲ್ಮಿಡಿ’ ಶಾಸನದ ಪ್ರತಿಕೃತಿ ಪ್ರತಿಷ್ಠಾಪನೆಗೆ ಮುಂದಾದ ಸರ್ಕಾರ..!

Popular Posts

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

You Might Also Like

ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?