newsics.com
ಬೆಂಗಳೂರು: ರಾಜ್ಯದಲ್ಲಿ ಮಹಿಳೆಯರ ಉಚಿತ ಪ್ರಯಾಣಕ್ಕೆ ಅನುಕೂಲ ಮಾಡಿಕೊಟ್ಟಿರುವ ರಾಜ್ಯ ಸರ್ಕಾರದ ಶಕ್ತಿ ಯೋಜನೆ ಸ್ಥಗಿತವಾಗುತ್ತದೆಯೇ ಎಂಬ ಸುದ್ದಿಗಳು ಹರಿದಾಡುತ್ತಿವೆ, ಇದರ ಬೆನ್ನಲ್ಲಿಯೇ ಸಿಎಂ ಸಿದ್ದರಾಮಯ್ಯ ಶಕ್ತಿ ಯೋಜನೆ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.
ಹೌದು, ಇತ್ತೀಚೆಗೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಶಕ್ತಿ ಯೋಜನೆಯ ಪರಿಷ್ಕರಣೆ ಬಗ್ಗೆ ಮಾತನಾಡಿದ್ದರು. ಸದ್ಯ ಈ ಬಗ್ಗೆ ಮಾತನಾಡಿರುವ ಸಿಎಂ, ಶಕ್ತಿ ಯೋಜನೆ ಪರಿಷ್ಕರಣೆ ಮಾಡುವ ವಿಚಾರ ಸರ್ಕಾರದ ಮುಂದೆ ಇಲ್ಲ. ನಿನ್ನೆಯ ಕಾರ್ಯಕ್ರದಲ್ಲಿ ನಾನು ಇರಲಿಲ್ಲ. ನಾನು ಮಂತ್ರಿಗಳ ಜೊತೆ ಮಾತಾಡುತ್ತೇನೆ. ಪರಿಷ್ಕರಣೆಯ ಯಾವುದೇ ಉದ್ದೇಶವಿಲ್ಲ. ಆ ರೀತಿ ಪ್ರಸ್ತಾಪವೂ ಸರ್ಕಾರದ ಮುಂದೆ ಇಲ್ಲ ಎಂದಿದ್ದಾರೆ.
ಇನ್ನು ರಾಜ್ಯದಲ್ಲಿ ಗ್ಯಾರಂಟಿ ಯೋಜನೆಯಿಂದ ಆರ್ಥಿಕ ಹೊರ ಆಗುತ್ತದೆ ಎಂಬ ಚರ್ಚೆ ಜೋರಿತ್ತು. ಇದರಿಂದ ಫಲಾನುಭವಿಗಳಲ್ಲಿ ಆತಂಕ ಎದುರಾಗಿತ್ತು. ಸದ್ಯ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.