Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮತ್ತದೇ ಆಸ್ಪತ್ರೆಗೆ ನಟ ದರ್ಶನ್ ದಾಖಲು, ಚಿಕಿತ್ಸೆ ಆರಂಭ, ವಾರದೊಳಗೆ ಹೈಕೋರ್ಟ್‌ಗೆ ವೈದ್ಯಕೀಯ ವರದಿ
ಕರ್ನಾಟಕಪ್ರಮುಖಮನರಂಜನೆ

ಮತ್ತದೇ ಆಸ್ಪತ್ರೆಗೆ ನಟ ದರ್ಶನ್ ದಾಖಲು, ಚಿಕಿತ್ಸೆ ಆರಂಭ, ವಾರದೊಳಗೆ ಹೈಕೋರ್ಟ್‌ಗೆ ವೈದ್ಯಕೀಯ ವರದಿ

Share
1 Min Read
SHARE

newsics.com

ಬೆಂಗಳೂರು: ಬೆನ್ನು ನೋವಿನ ಚಿಕಿತ್ಸೆಗಾಗಿ ನಟ ದರ್ಶನ್ ಶುಕ್ರವಾರ ಬೆಂಗಳೂರಿನ ಕೆಂಗೇರಿ ಬಳಿಯ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಇಂದು ಹಲವು ಪರೀಕ್ಷೆಗಳಿಗೆ ಒಳಗಾಗಲಿದ್ದಾರೆ. ಪರೀಕ್ಷೆಗಳ ವರದಿ ಆಧರಿಸಿ, ವೈದ್ಯರೊಟ್ಟಿಗೆ ಚರ್ಚೆ ನಡೆಸಿ ಮುಂದಿನ ಚಿಕಿತ್ಸೆ ಬಗ್ಗೆ ನಿರ್ಣಯವನ್ನು ದರ್ಶನ್ ಹಾಗೂ ಅವರ ಕುಟುಂಬ ತೆಗೆದುಕೊಳ್ಳಲಿದೆ.

ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಜೈಲು ಪಾಲಾಗಿದ್ದ ನಟ ದರ್ಶನ್‌ಗೆ ವೈದ್ಯಕೀಯ ಚಿಕಿತ್ಸೆಗಾಗಿ ಕೋರ್ಟ್ 6 ವಾರಗಳ ಕಾಲ ಮಧ್ಯಂತರ ಜಾಮೀನು ನೀಡಿದೆ. ಈ ವಾರದಲ್ಲಿ ಹೈಕೋರ್ಟ್‌ಗೆ ದರ್ಶನ್ ಅವರು ತಮ್ಮ ವೈದ್ಯಕೀಯ ವರದಿಯನ್ನೂ ನೀಡಬೇಕಿದೆ.

ಬಿಜಿಎಸ್ ಆಸ್ಪತ್ರೆಗೆ ಬೆನ್ನುನೋವಿನ ಚಿಕಿತ್ಸೆಗಾಗಿ ದಾಖಲಾಗಿರುವ ಅವರನ್ನು ವಿವಿಧ ಪರೀಕ್ಷೆಗೆ ಒಳಪಡಿಸಲಿರುವ ವೈದ್ಯರು, ಆ ಬಳಿಕ ಬೆನ್ನು ನೋವಿಗೆ ಶಸ್ತ್ರ ಚಿಕಿತ್ಸೆ ಮಾಡಲಿದ್ದಾರೆ ಎನ್ನಲಾಗುತ್ತಿದೆ.
ಎರಡು ದಿನದ ಹಿಂದೆ ಬಳ್ಳಾರಿ ಜೈಲಿನಿಂದ ಮನೆಗೆ ಮರಳಿರುವ ದರ್ಶನ್ ಇನ್ನೂ ಆಸ್ಪತ್ರೆ ಕಡೆ ಮುಖ ಹಾಕಿಲ್ಲ. ಅಲ್ಲದೆ ಒಂದು ವಾರದಲ್ಲಿ ದರ್ಶನ್ರ ಚಿಕಿತ್ಸೆಯ ಮಾಹಿತಿ ನೀಡಬೇಕೆಂದು ನ್ಯಾಯಾಲಯ ಹೇಳಿದೆ. ಹೀಗಿದ್ದರೂ ದರ್ಶನ್ ಆಸ್ಪತ್ರೆಗೆ ಹೋಗದೇ ಇರುವುದು ಆಶ್ಚರ್ಯ ತರಿಸಿತ್ತು. ಆದರೆ ಇಂದು ದರ್ಶನ್ ಆಸ್ಪತ್ರೆಗೆ ತೆರಳಿದ್ದಾರೆ.
ನಿನ್ನೆ ಪತ್ನಿಯ ಮನೆಗೆ ತಮ್ಮ ವಾಹನಗಳನ್ನು ಸಹಾಯಕರಿಂದ ತರಿಸಿಕೊಂಡು ಎಲ್ಲ ವಾಹನಗಳಿಗೆ ಪೂಜೆ ಮಾಡಿದ್ದರು. ನಿನ್ನೆ ದರ್ಶನ್ ಪುತ್ರ ವಿನೀಶ್ ಹುಟ್ಟುಹಬ್ಬ ಸಹ ಇತ್ತಾದ್ದರಿಂದ ನಿನ್ನೆ ಆಸ್ಪತ್ರೆಗೆ ಹೋಗಿರಲಿಲ್ಲ. ಇಂದು ಅಮಾವಾಸ್ಯೆ ಇದ್ದು, ಅಮಾವಾಸ್ಯೆ ಮುಗಿಸಿಕೊಂಡು ಆಸ್ಪತ್ರೆಗೆ ಹೋಗಲಿದ್ದಾರೆ ಎನ್ನಲಾಗಿತ್ತು. ಆದರೆ ದರ್ಶನ್ ಅಮಾವಾಸ್ಯೆ ಮುಗಿಯುವ ಮುಂಚೆಯೇ ಆಸ್ಪತ್ರೆಗೆ ತೆರಳಿದ್ದಾರೆ.
ದರ್ಶನ್ ಈ ಹಿಂದೆಯೂ ಸಹ ಬಿಜಿಎಸ್ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಪಡೆದುಕೊಂಡಿದ್ದರು. 2013 ರಲ್ಲಿ ದರ್ಶನ್ ‘ಬೃಂದಾವನ’ ಸಿನಿಮಾದ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದಾಗ ಕುದುರೆ ಓಡಿಸುವಾಗ ಕುದುರೆಯಿಂದ ಬಿದ್ದು ಬೆನ್ನು ಹಾಗೂ ಕತ್ತಿನ ಭಾಗಕ್ಕೆ ಗಾಯ ಮಾಡಿಕೊಂಡಿದ್ದರು.

ಆಗ ಇದೇ ಬಿಜಿಎಸ್‌ಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದರು. ಅಲ್ಲದೆ ಆಗ ಹಲವು ದಿನಗಳ ಕಾಲ ಕೊರಳಿಗೆ ಪಟ್ಟಿ ಕಟ್ಟಿಕೊಂಡು ಓಡಾಡುತ್ತಿದ್ದರು. ಈಗ ಮತ್ತೆ ಬಿಜಿಎಸ್‌ಗೆ ದಾಖಲಾಗಿದ್ದಾರೆ.

ಮೈಮೇಲೆ ಬಿಸಿ ಟೀ ಪಾತ್ರೆ ಬಿದ್ದು 2 ವರ್ಷದ ಕಂದಮ್ಮ ಸಾವು

UPI ಪಾವತಿಯಲ್ಲಿ ಇಂದಿನಿಂದ ಮಹತ್ವದ ಬದಲಾವಣೆ, ಇದು ನಿಮಗೂ ತಿಳಿದಿರಲಿ

ತಿರುಪತಿಯಲ್ಲಿ ಹಿಂದೂಗಳು ಮಾತ್ರ ಕೆಲಸ ಮಾಡಬೇಕು: TTD ನೂತನ ಅಧ್ಯಕ್ಷ ಬಿ.ಆರ್ ನಾಯ್ಡು ಆದೇಶ

TAGGED:actor Darshan was admitted to the same hospitalAgainmedical report to the High Court within a weektreatment started
Share This Article
Facebook Twitter Copy Link Print
Previous Article ಮೈಮೇಲೆ ಬಿಸಿ ಟೀ ಪಾತ್ರೆ ಬಿದ್ದು 2 ವರ್ಷದ ಕಂದಮ್ಮ ಸಾವು
Next Article ಆಂಧ್ರಪ್ರದೇಶ: ವೈ.ಎಸ್. ಶರ್ಮಿಳಾ ಭದ್ರತೆಗೆ ಕಾಂಗ್ರೆಸ್ ಮನವಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?