newsics.com
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ದರ್ಶನ್‌ಗೆ ಬರೋಬ್ಬರಿ 5 ತಿಂಗಳ ಬಳಿಕ ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿದ್ದು, ಮೊನ್ನೆಯಷ್ಟೇ ಮನೆಗೆ ಆಗಮಿಸಿದ್ದಾರೆ.
ಜೈಲಿನಿಂದ ನೇರವಾಗಿ ಪತ್ನಿ ವಿಜಯಲಕ್ಷ್ಮಿ ನಿವಾಸಕ್ಕೆ ತೆರಳಿದ್ದು, ಪತ್ನಿ ಹಾಗೂ ಪುತ್ರನ ಜೊತೆ ದೀಪಾವಳಿ ಆಚರಿಸಿದ್ದಾರೆ. ಸದ್ಯ ಬೆನ್ನುನೋವು ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಇಂದು ನಟ ದರ್ಶನ್ ಆಸ್ಪತ್ರೆಗೆ ದಾಖಲಾಗಲಿದ್ದಾರೆ ಎಂದು ಆಪ್ತ ಮೂಲಗಳು ತಿಳಿಸಿವೆ.
ಹೌದು, ಬೆನ್ನುನೋವು ಹಿನ್ನೆಲೆ ಇಂದು 10 ಗಂಟೆ ಸುಮಾರಿಗೆ ಆಸ್ಪತ್ರೆಗೆ ದಾಖಲಾಗಲಿದ್ದು, ಯಾವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಾರೆ ಎನ್ನುವುದು ಇನ್ನೂ ಸ್ಪಷ್ಟವಾಗಿಲ್ಲ. ಬಹುತೇಕ ಅಪೋಲೋ ಅಥವಾ ಮಣಿಪಾಲ್ ಆಸ್ಪತ್ರೆ ದಾಖಲಾಗುವ ಸಾಧ್ಯತೆಯಿದ್ದು, ಈ ವಿಷಯವನ್ನು ಗೌಪ್ಯವಾಗಿಡಲು ಕುಟುಂಬಸ್ಥರು ನಿರ್ಧರಿಸಿದ್ದಾರೆ.
ದರ್ಶನ್ ಆಸ್ಪತ್ರೆಗೆ ಹೋಗುವ ಹಿನ್ನೆಲೆ ಅಪಾರ್ಟ್ಮೆಂಟ್ ಬಳಿ ಅಭಿಮಾನಿಗಳು ಜಮಾಯಿಸುವ ಸಾಧ್ಯತೆಯಿದ್ದು, ಸದ್ಯ ಅಪಾರ್ಟ್ಮೆಂಟ್ ಬಳಿ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.