newsics.com
ನವದೆಹಲಿ: ದೀಪಾವಳಿಯ ಲಕ್ಷ್ಮೀ ಪೂಜೆಯ ದಿನದಂದು ಅಂದರೆ ಶುಕ್ರವಾರ ಚಿನ್ನ ಮತ್ತು ಬೆಳ್ಳಿ ಬೆಲೆ ಎರಡೂ ದೊಡ್ಡ ಮಟ್ಟದಲ್ಲಿ ಇಳಿಕೆ ಕಂಡಿವೆ.
ಚಿನ್ನದ ಬೆಲೆ ಗ್ರಾಮ್‌ಗೆ 70-77 ರೂ.ನಷ್ಟು ಇಳಿಕೆ ಕಂಡಿದೆ. ಬೆಳ್ಳಿ ಬೆಲೆ ಗ್ರಾಮ್‌ಗೆ 3 ರೂ. ಕಡಿಮೆ ಆಗಿದೆ. 100 ರೂ. ಇದ್ದ ಬೆಳ್ಳಿ ಬೆಲೆ 97 ರೂ.ಗೆ ಇಳಿದಿದೆ.
ವಿದೇಶದ ಮಾರುಕಟ್ಟೆಗಳಲ್ಲಿ ಚಿನ್ನ, ಬೆಳ್ಳಿ ಬೆಲೆಗಳು ಬಹುತೇಕ ಸ್ಥಿರವಾಗಿವೆ. ಭಾರತದಲ್ಲಿ ಸದ್ಯ 10 ಗ್ರಾಮ್‌ನ 22 ಕ್ಯಾರಟ್ ಚಿನ್ನದ ಬೆಲೆ 74,550 ರುಪಾಯಿ ಇದೆ. 24 ಕ್ಯಾರಟ್‌ನ ಅಪರಂಜಿ ಚಿನ್ನದ ಬೆಲೆ 81,330 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 10,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್‌ಗೆ 74,550 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್‌ಗೆ 10,000 ರುಪಾಯಿಯಲ್ಲಿ ಇದೆ.
ಬೆಂಗಳೂರಲ್ಲಿ ಚಿನ್ನ, ಬೆಳ್ಳಿ ಬೆಲೆ:
22 ಕ್ಯಾರಟ್‌ನ 10 ಗ್ರಾಂ ಚಿನ್ನದ ಬೆಲೆ: 73,850 ರೂ., 24 ಕ್ಯಾರಟ್‌ನ 10 ಗ್ರಾಂ ಚಿನ್ನದ ಬೆಲೆ: 80,560 ರೂ., ಬೆಳ್ಳಿ ಬೆಲೆ 10 ಗ್ರಾಂಗೆ: 100 ರೂ.
ಪತ್ನಿ, ಪುತ್ರನ ಜೊತೆ ದೀಪಾವಳಿ ಆಚರಿಸಿದ ದರ್ಶನ್; ಇಂದು ಆಸ್ಪತ್ರೆಗೆ ದಾಖಲು?