newsics.com
ಬೆಳಗಾವಿ: ಬೆಳಗಾವಿಯಲ್ಲಿ ಅದ್ಧೂರಿ ಕನ್ನಡ ರಾಜ್ಯೋತ್ಸವ ಹಿನ್ನೆಲೆ ರಾಜ್ಯೋತ್ಸವ ಮೆರವಣಿಗೆ ಭದ್ರತೆಗಾಗಿ 2200ಕ್ಕೂ ಅಧಿಕ ಪೊಲೀಸರ ನಿಯೋಜನೆ ಮಾಡಲಾಗಿದೆ ಎಂದು ಡಿಸಿಪಿ ರೋಹನ್ ಜಗದೀಶ್ ಹೇಳಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ರಾಜ್ಯೋತ್ಸವದ ಭದ್ರತೆಗಾಗಿ ಆಯಾಕಟ್ಟಿನ ಸ್ಥಳದಲ್ಲಿ ಸಿಸಿ ಕ್ಯಾಮೆರಾ ಅಳವಡಿಸಿ ಕಣ್ಗಾವಲು ನಿಗಾವಹಿಸಲಾಗಿದೆ. ಯಾವುದೇ ರೀತಿಯ ಅಹಿತಕರ ಘಟನೆಗಳು ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳಲಾಗಿದೆ ಎಂದರು.
ಬೆಳಗಾವಿ ಕಮಿಷನರೇಟ್ ವ್ಯಾಪ್ತಿಯಲ್ಲಿನ 800 ಪೊಲೀಸರನ್ನು ಭದ್ರತೆಗೆ ನಿಯೋಜನೆ ಮಾಡಲಾಗಿದೆ. ಹೊರ ಜಿಲ್ಲೆಯಿಂದ ಮೂವರು ಎಸಿಪಿ ದರ್ಜೆಯ ಅಧಿಕಾರಿಗಳು 8 ಎಸಿಪಿಗಳು, 25 ಸಿಪಿಐಗಳು, 55 ಪಿಎಸ್ಐಗಳನ್ನು ನಿಯೋಜನೆ ಮಾಡಲಾಗಿದೆ