newsics.com
ನಟ ಡಾಲಿ ಧನಂಜಯ್ ಹಸೆಮಣೆ ಏರುತ್ತಿದ್ದು, ಮದುವೆ ಯಾವಾಗ ಎನ್ನುವ ಪ್ರಶ್ನೆಗೆ ಉತ್ತರ ಸಿಕ್ಕಿದೆ.
ದೀಪಾವಳಿ ಹಬ್ಬದ ಸಂಭ್ರಮದಲ್ಲಿ ಡಾಲಿ ತನ್ನ ಬಾಳಸಂಗಾತಿಯನ್ನು ಪರಿಚಯಿಸಿದ್ದಾರೆ. ಭಾವಿ ಪತ್ನಿ ಜೊತೆಗಿನ ಸುಂದರವಾದ ವಿಡೀಯೋ ಹಂಚಿಕೊಳ್ಳುವ ಮೂಲಕ ಧನಂಜಯ್ ಮದುವೆ ಸುದ್ದಿಯನ್ನು ಹಂಚಿಕೊಂಡಿದ್ದಾರೆ.

ಡಾಲಿ ಯಾರನ್ನು ಮುದುವೆಯಾಗುತ್ತಾರೆ, ಚಿತ್ರರಂಗದವರಾ ಅಥವಾ ಬೇರೆ ಕ್ಷೇತ್ರದವರನ್ನು ಮದುವೆಯಾಗುತ್ತಾರಾ ಎನ್ನುವ ಕುತೂಹಲ ಅಭಿಮಾನಿಗಳಿತ್ತು. ಇದೀಗ ಆ ಎಲ್ಲಾ ಕುತೂಹಲಕ್ಕೆ ತೆರೆ ಎಳೆದಿದ್ದಾರೆ. ಧನಂಜಯ ವೈದ್ಯೆಯನ್ನು ಕೈ ಹಿಡಿಯುತ್ತಿದ್ದಾರೆ.
ಹೌದು ಡಾಲಿ ಮದುವೆಯಾಗುತ್ತಿರುವ ಹುಡುಗಿಯ ಹೆಸರು ಧನ್ಯತಾ. ಗೈನೋಕಾಲಾಜಿಸ್ಟ್ ಆಗಿರುವ ಧನ್ಯತಾ ಡಾಲಿ ಅನ್ನು ಕೈ ಹಿಡುಯುತ್ತಿದ್ದಾರೆ. ಡಾಲಿ ಮತ್ತು ಧನ್ಯತಾ ಇಬ್ಬರು ಅನೇಕ ವರ್ಷಗಳ ಪರಿಚಯ, ಈ ಪರಿಚಯ ಪ್ರೀತಿಗೆ ತಿರುಗಿ ಇದೀಗ ಹಸೆಮಣೆ ಏರುತ್ತಿದ್ದಾರೆ. ಅಂದಹಾಗೆ ಇಬ್ಬರ ಮದುವೆ ಫೆಬ್ರವರಿಯಲ್ಲಿ ನಡೆಯಲಿದೆ. ಫೆಬ್ರವರಿ 16ರಂದು ಮೈಸೂರಿನ ಎಕ್ಸಿಬಿಷನ್ ಗ್ರೌಂಡ್‌ನಲ್ಲಿ ಡಾಲಿ ಮತ್ತು ಧನ್ಯತಾ ಮದುವೆ ನಡೆಯಲಿದೆ