Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ವಕ್ಫ್ ನೋಟಿಸ್ ತಕ್ಷಣ ಹಿಂಪಡೆಯಲು ಸಿಎಂ ಸೂಚನೆ, ಪಹಣಿ ತಿದ್ದುಪಡಿ ರದ್ದತಿಗೂ ಆದೇಶ
ಕರ್ನಾಟಕಪ್ರಮುಖ

ವಕ್ಫ್ ನೋಟಿಸ್ ತಕ್ಷಣ ಹಿಂಪಡೆಯಲು ಸಿಎಂ ಸೂಚನೆ, ಪಹಣಿ ತಿದ್ದುಪಡಿ ರದ್ದತಿಗೂ ಆದೇಶ

Share
1 Min Read
SHARE

newsics.com

ಬೆಂಗಳೂರು: ವಕ್ಫ್‌ ಬೋರ್ಡ್ ಅಧ್ವಾನದಿಂದ ಉಂಟಾಗಿರುವ ವಿವಾದ ಸರಿಪಡಿಸಲು‌ ಮುಂದಾಗಿರುವ ಸಿಎಂ ಸಿದ್ದರಾಮಯ್ಯ, ವಕ್ಫ್ ವಿಚಾರದಲ್ಲಿ ರೈತರಿಗೆ ನೀಡಲಾಗಿರುವ ನೋಟಿಸ್‌ಗಳನ್ನು ತಕ್ಷಣ ವಾಪಸ್‌ ಪಡೆಯುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ವಿವಾದ ಹಿನ್ನೆಲೆಯಲ್ಲಿ ಕಂದಾಯ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಮತ್ತು ವಕ್ಫ್‌ ಮಂಡಳಿಯ ಹಿರಿಯ ಅಧಿಕಾರಿಗಳ ಜತೆ ಶನಿವಾರ ಸುದೀರ್ಘ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ, ರೈತರಿಗೆ ಯಾವುದೇ ರೀತಿಯ ತೊಂದರೆ ನೀಡದಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಅಧಿಕಾರಿಗಳೂ ಇಂತಹ ವಿವಾದ ಸೃಷ್ಟಿಯಾಗದಂತೆ ಎಚ್ಚರ ವಹಿಸಬೇಕು. ರೈತರಿಗೆ ತೊಂದರೆ ಆಗುವ ಯಾವುದೇ ತೀರ್ಮಾನ ಕೈಗೊಳ್ಳಬಾರದು ಎಂದು ಸಿಎಂ ನಿರ್ದೇಶನ ನೀಡಿದರು.

ವಕ್ಫ್‌ ಜಮೀನು ವಿಚಾರದಲ್ಲಿ ಇತ್ತೀಚೆಗೆ ನಡೆದಿರುವ ಬೆಳವಣಿಗೆಗಳ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಅವರು, ನೋಟಿಸ್‌ ವಿಚಾರದಲ್ಲಿ ಕೆಲ ಅಧಿಕಾರಿಗಳು ಕೈಗೊಂಡಿರುವ ಕ್ರಮದ ಬಗ್ಗೆಯೂ ಸಭೆಯಲ್ಲಿ ಗರಂ ಆಗಿದ್ದಾರೆ.

ರೈತರ ಪಹಣಿ ಬದಲಾವಣೆ ಸಂಬಂಧ ಈಗಾಗಲೇ ನೀಡಿರುವ ನೋಟಿಸ್‌ಗಳನ್ನು ತಕ್ಷಣ ವಾಪಸ್‌ ಪಡೆಯಬೇಕು. ರೈತರ ಸ್ವಾಧೀನದಲ್ಲಿರುವ ಜಮೀನುಗಳಿಗೆ ಯಾವುದೇ ರೀತಿಯ ತೊಂದರೆ ನೀಡಬಾರದು. ಕಾನೂನುಬಾಹಿರವಾಗಿ ಹಾಗೂ ನೋಟಿಸ್‌ ನೀಡದೆ ಪಹಣಿಯಲ್ಲಿ ಯಾವುದೇ ರೀತಿಯ ತಿದ್ದುಪಡಿಗಳನ್ನು ಮಾಡಿದ್ದರೆ ತಕ್ಷಣ ರದ್ದು ಮಾಡಬೇಕು ಎಂದು ಸೂಚಿಸಿದರು.

ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್‌, ಕಂದಾಯ ಸಚಿವ ಕೃಷ್ಣ ಬೈರೇಗೌಡ, ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕಟಾರಿಯಾ, ಮುಖ್ಯಮಂತ್ರಿಯವರ ಕಾನೂನು ಸಲಹೆಗಾರ ಪೊನ್ನಣ್ಣ, ವಕ್ಫ್‌ ಮಂಡಳಿಯ ಸಿಇಒ ಜಿಲಾನಿ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶ಼ಿ ನಸೀರ್‌ ಅಹಮದ್‌, ಅಲ್ಫ ಸಂಖ್ಯಾತರ ಕಲ್ಯಾಣ ಇಲಾಖೆ ಕಾರ್ಯದರ್ಶಿ ಮನೋಜ್‌ ಜೈನ್‌‌ ಮತ್ತಿತರರು ಸಭೆಯಲ್ಲಿ ಹಾಜರಿದ್ದರು.

ಗೂಗಲ್‌ಗೆ ಭಾರೀ ಸಂಕಷ್ಟ, 20 ಡಿಸಿಲಿಯನ್ ಡಾಲರ್ ದಂಡ, ಕಾರಣವೇನು? ದಂಡ ಪಾವತಿಗೆ ಜಗತ್ತಿನಲ್ಲಿರುವ ಹಣವೂ ಸಾಲದು!

https://www.newsics.com/2024/11/02/spain-braces-for-devastating-floods-death-toll-rises-to-205/

ನ.30 ರೊಳಗೆ `e-KYC’ ಮಾಡದಿದ್ದರೆ ಮುಂದಿನ ತಿಂಗಳು `ರೇಷನ್’ ಸಿಗಲ್ಲ ..!

TAGGED:CM instructs to withdraw waqf notice immediatelyorder to cancel Pahani amendment
Share This Article
Facebook Twitter Copy Link Print
Previous Article 3 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ; ಕೊಲೆ ಮಾಡಿ ಹೊಲದಲ್ಲಿ ಹೂತುಹಾಕಿದ ಸಂಬಂಧಿ
Next Article ರಾಜ್ಯದಲ್ಲಿ ಆಸ್ತಿ ಖರೀದಿ, ಮಾರಾಟಕ್ಕೆ ಇ- ಖಾತಾ ಕಡ್ಡಾಯ

Popular Posts

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read

Devanahalli Gang Rape | ದೇವನಹಳ್ಳಿ ಸಾಮೂಹಿಕ ಅತ್ಯಾಚಾರ ಪ್ರಕರಣ: ಅಪ್ರಾಪ್ತೆಗೆ ದೇವಾಲಯಕ್ಕೆ ಕರೆದುಕೊಂಡು ಹೋಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ, ಮೂವರು ಆರೋಪಿಗಳ ಬಂಧನ

2 Min Read

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read

Want to Look Younger? ಯಂಗ್‌ ಆಗಿ ಕಾಣಬೇಕಾ? ಹೀಗಿರಲಿ ನಿಮ್ಮ ದಿನನಿತ್ಯದ ಅಭ್ಯಾಸಗಳು

2 Min Read

You Might Also Like

ಪ್ರಮುಖ

Want Success in Business? ವ್ಯಾಪಾರದಲ್ಲಿ ಯಶಸ್ಸು ಕಾಣಬೇಕಾ? ಈ ವಾಸ್ತು ಟಿಪ್ಸ್ ತಪ್ಪದೇ ಪಾಲಿಸಿ!

1 Min Read
ಅನಾವರಣಪ್ರಮುಖವಿದೇಶವೈರಲ್

Human Fridge ವಿಪರೀತ ಸೆಕೆಯೆನಿಸಿದರೆ ಅಂದುಕೊಂಡಂತೆ ನೀವು ಫ್ರಿಡ್ಜ್‌ನಲ್ಲೇ ಕೂಲ್ ಆಗಬಹುದು! ಬಂದಿದೆ ಹ್ಯೂಮನ್ ಫ್ರಿಡ್ಜ್!

2 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 21 ಜುಲೈ 2026, ಇಂದಿನ ನಿಮ್ಮ ಗ್ರಹಗತಿ ಹೇಗಿದೆ?

2 Min Read
ಪ್ರಮುಖವಿದೇಶವೈರಲ್

Viral News ಫಿಫಾ ವಿಶ್ವಕಪ್ ವೇದಿಕೆಯಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್‌ರನ್ನು ಪಕ್ಕಕ್ಕೆ ತಳ್ಳಿದರಾ ರೋಡ್ರಿ? ವಿಡಿಯೋ ನೋಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?