ಪ್ರಚಾರದ ವೇಳೆ ಬೈಕ್‌ನಿಂದ ಬಿದ್ದ ನಿಖಿಲ್‌ ಕುಮಾರಸ್ವಾಮಿ

newsics.com ರಾಮನಗರ: ಉಪಚುನಾವಣೆಗೆ ಮೂರು ಪಕ್ಷಗಳು ತಮ್ಮದೇ ರೀತಿಯಲ್ಲಿ ಭರ್ಜರಿ ತಯಾರಿ ನಡೆಸಿವೆ. ಈ ಮಧ್ಯೆ ಇಂದು‌ ಚನ್ನಪಟ್ಟಣ ಉಪಚುನಾವಣಾ ಪ್ರಚಾರದ ವೇಳೆ ನಿಖಿಲ್‌ ಕುಮಾರಸ್ವಾಮಿ ಬೈಕ್‌ನಿಂದ ಬಿದ್ದಿದ್ದಾರೆ. ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಮಂಗಾಡಹಳ್ಳಿಯಲ್ಲಿ ನಿಖಿಲ್‌ ಕಾರ್ಯಕರ್ತನ ಬೈಕ್‌ ಏರಿ ಪ್ರಚಾರ ನಡೆಸುತ್ತಿದ್ದರು. ಮಳೆ ನೀರಿನಿಂದ ಕೆಸರಾಗಿದ್ದ ರಸ್ತೆಯಲ್ಲಿ ಆಯತಪ್ಪಿ ಬಿದ್ದಿದ್ದಾರೆ. ತಕ್ಷಣವೇ ಸ್ಥಳೀಯ ಕಾರ್ಯಕರ್ತರು ನಿಖಿಲ್‌ ನೆರವಿಗೆ ಬಂದಿದ್ದು ಮೇಲಕ್ಕೆತ್ತಿ ಉಪಚರಿಸಿದ್ದಾರೆ. ಸ್ವಲ್ಪಹೊತ್ತು ವಿಶ್ರಾಂತಿ ಪಡೆದು ಮತ್ತೆ ನಿಖಿಲ್‌ ಕುಮಾರಸ್ವಾಮಿ ಪ್ರಚಾರ ಕಾರ್ಯ ಮುಂದುವರಿಸಿದರು.