newsics.com
ಶ್ರೀನಗರ: ಖನ್ಯಾರ್ ಪ್ರದೇಶದಲ್ಲಿ ಶನಿವಾರ (ನ.2) ನಡೆದ ಎನ್‌ಕೌಂಟರ್‌ನಲ್ಲಿ ಉಗ್ರ ಸಂಘಟನೆ ಲಷ್ಕರ್-ಎ-ತೊಯ್ಬಾದ (LeT) ಪಾಕಿಸ್ತಾನಿ ಉನ್ನತ ಕಮಾಂಡರ್‌ನನ್ನು ಹತ್ಯೆಗೈಯಲಾಗಿದೆ.
ಕಾರ್ಯಾಚರಣೆ ನಾಲ್ವರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಖಚಿತ ಮಾಹಿತಿ ಆಧರಿಸಿ ಭದ್ರತಾ ಪಡೆಗಳು ಖನ್ಯಾರ್‌ನ ಜನನಿಬಿಡ ಪ್ರದೇಶದಲ್ಲಿ ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆ ಪ್ರಾರಂಭಿಸಿದವು. ಈ ವೇಳೆ ಎನ್‌ಕೌಂಟರ್‌ಗೆ ತಿರುಗಿತು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಭಯೋತ್ಪಾದಕರು ಅಡಗಿದ್ದ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿತು ಮತ್ತು ದಟ್ಟವಾದ ಹೊಗೆ ಕಾಣಿಸಿಕೊಂಡಿತು. ಎನ್‌ಕೌಂಟರ್‌ನಲ್ಲಿ ಇಬ್ಬರು ಸಿಆರ್‌ಪಿಎಫ್ ಯೋಧರು ಮತ್ತು ಇಬ್ಬರು ಪೊಲೀಸರು ಗಾಯಗೊಂಡಿದ್ದಾರೆ. ಅವರನ್ನು ಸೇನಾ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಅವರ ಸ್ಥಿತಿ ಸ್ಥಿರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹತ್ಯೆಯಾದ ಭಯೋತ್ಪಾದಕ ಪಾಕ್‌ನ ಉಸ್ಮಾನ್ ಎಂದು ಗುರುತಿಸಲಾಗಿದ್ದು ಎಲ್‌ಇಟಿಗೆ ಅತ್ಯಂತ ಹಿರಿಯ ಕಮಾಂಡರ್ ಆಗಿ ಬಹಳ ಸಮಯದಿಂದ ಕಣಿವೆಯಲ್ಲಿ ಸಕ್ರಿಯನಾಗಿ ಹಲವು ದಾಳಿಗಳಲ್ಲಿ ಭಾಗಿಯಾಗಿದ್ದ. ಇನ್‌ಸ್ಪೆಕ್ಟರ್ ಮಸ್ರೂರ್ ವಾನಿ ಹತ್ಯೆಯಲ್ಲಿ ಕೂಡ ಭಾಗಿಯಾಗಿದ್ದ. ಈತನ ಹತ್ಯೆಯು ಜಮ್ಮು ಮತ್ತು ಕಾಶ್ಮೀರದಲ್ಲಿ ಎಲ್ಇಟಿಗೆ ದೊಡ್ಡ ಹೊಡೆತ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
2023ರ ಅಕ್ಟೋಬರ್‌ನಲ್ಲಿ ಇಲ್ಲಿನ ಈದ್ಗಾ ಮೈದಾನದಲ್ಲಿ ಕ್ರಿಕೆಟ್ ಆಡುತ್ತಿದ್ದ ವೇಳೆ ವಾನಿ ಅವರನ್ನು ಉಸ್ಮಾನ್ ಸಮೀಪದಿಂದ ಗುಂಡಿಕ್ಕಿ ಹತ್ಯೆ ಮಾಡಿದ್ದ.
ಇನ್ನೊಂದು ಕಾರ್ಯಾಚರಣೆಯಲ್ಲಿ, ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಶಾಂಗಸ್-ಲರ್ನೂ ಪ್ರದೇಶದ ಹಲ್ಕನ್ ಗಲಿ ಬಳಿ ಭದ್ರತಾ ಪಡೆಗಳು ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ದುಬೈನಿಂದ ಬಂದ ಏರ್ ಇಂಡಿಯಾ ವಿಮಾನದಲ್ಲಿ ಮದ್ದುಗುಂಡಿನ ಕಾರ್ಟ್ರಿಡ್ಜ್ ಪತ್ತೆ, ಹೇಗಾಯ್ತು ಭದ್ರತಾ ಲೋಪ?