newsics.com
ಬೆಂಗಳೂರು: ನಟ ವಸಿಷ್ಠ ಸಿಂಹ ಮತ್ತು ಹರಿಪ್ರಿಯಾ ದಂಪತಿ ದೀಪಾವಳಿ ಹಾಗೂ ಕನ್ನಡ ರಾಜ್ಯೋತ್ಸವ ದಿನದಂದು ಗುಡ್ ನ್ಯೂಸ್ ಕೊಟ್ಟಿದ್ದಾರೆ.
ಶೀಘ್ರದಲ್ಲೇ ತಂದೆ-ತಾಯಿಯಾಗುತ್ತಿರುವ ಸಿಹಿಸುದ್ದಿಯನ್ನು ಈ ಜೋಡಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದೆ. ಮಾಲ್ಡೀವ್ಸ್ ನಲ್ಲಿ ವಿಶೇಷ ಫೋಟೋಶೂಟ್ ಮಾಡಿಸಿರುವ ಸಿಂಹಪ್ರಿಯಾ ದಂಪತಿ, ಮೊದಲ ಮಗುವಿನ ನಿರೀಕ್ಷೆಯಲ್ಲಿರುವುದಾಗಿ ಬಹಿರಂಗಪಡಿಸಿದೆ.
ಫೋಟೋಗಳಲ್ಲಿ ಹರಿಪ್ರಿಯಾ ಬೇಬಿ ಬಂಪ್ ಲುಕ್ನಲ್ಲಿ ಕಾಣಿಸಿಕೊಂಡಿದ್ದಾರೆ. ಇನ್ನೂ ನಟ ವಸಿಷ್ಠ ಸಿಂಹ ಅವರು ಬೇಬಿ ಬಂಪ್ ಹಿಡಿದು ಕ್ಯಾಮೆರಾಗೆ ಪೋಸ್ ಕೊಟ್ಟಿದ್ದಾರೆ.