ನೇಣು ಬಿಗಿದುಕೊಂಡು ನಟ ಗುರುಪ್ರಸಾದ್‌ ಆತ್ಮಹತ್ಯೆ

newsics.com ಬೆಂಗಳೂರು: ನಟ, ನಿರ್ದೇಶಕ ಗುರುಪ್ರಸಾದ್‌ ಮಾದನಾಯಕಹಳ್ಳಿ ಅಪಾರ್ಟ್‌ಮೆಂಟ್‌ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸದಾ ವಿವಾದಗಳಿಂದಲೇ ಸುದ್ದಿಯಾಗುತ್ತಿದ್ದ ನಿರ್ದೇಶಕ ಗುರುಪ್ರಸಾದ್‌ (52) ಅವರು 3 ದಿನಗಳ ಹಿಂದೆ ನೇಣಿಗೆ ಶರಣಾಗಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಅವರ ಮೃತದೇಹ ಅಪಾರ್ಟ್‌ಮೆಂಟ್‌‌ನಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ನವೆಂಬರ್‌ 2ರಂದು ಗುರುಪ್ರಸಾದ್‌ ಹುಟ್ಟುಹಬ್ಬ. ಈ ಬೆನ್ನಲ್ಲೇ ಅವರ ಸಾವಿನ ಸುದ್ದಿ ಚಿತ್ರರಂಗದ ಮಂದಿಗೆ ಶಾಕ್‌ ಕೊಟ್ಟಿದೆ. ಮೂರು ದಿನಗಳ ಹಿಂದೆ ಗುರುಪ್ರಸಾದ್‌ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. … Continue reading ನೇಣು ಬಿಗಿದುಕೊಂಡು ನಟ ಗುರುಪ್ರಸಾದ್‌ ಆತ್ಮಹತ್ಯೆ