newsics.com
ಬೆಂಗಳೂರು: ಕಾರು ಡಿಕ್ಕಿ ಹೊಡೆದ ಪರಿಣಾಮ ಟೆಕ್ಕಿ ಸ್ಥಳದಲ್ಲೇ ಸಾವನ್ನಪ್ಪಿರೋ ಘಟನೆ ಕೆಂಗೇರಿ ಬಸ್ಸು ನಿಲ್ದಾಣದ ಬಳಿ ನಡೆದಿದೆ. ಸಂಧ್ಯಾ (30) ಮೃತ ಟೆಕ್ಕಿ.
ಆಫೀಸ್ ಮುಗಿಸಿ ಕೆಂಗೇರಿ ಬಸ್ ನಿಲ್ದಾಣಕ್ಕೆ ಬಂದಿದ್ದ ಮೃತ ಸಂಧ್ಯಾ ಅಲ್ಲಿಂದ ಮನೆಗೆ ಹೋಗಲು ರಸ್ತೆ ದಾಟುವಾಗ ವೇಗವಾಗಿ ಬಂದ ಬೆನ್ಜ್ ಕಾರು ಡಿಕ್ಕಿಯಾಗಿದೆ. ಪರಿಣಾಮ ಸ್ಥಳದಲ್ಲೇ ಯುವತಿ ಸಾವನ್ನಪ್ಪಿದ್ದಾರೆ.
ಯುವತಿಗೆ ಡಿಕ್ಕಿ ಹೊಡೆದು ಪರಾರಿಯಾಗಲು ಯತ್ನಿಸಿದ್ದ ಯುವಕರನ್ನು ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಘಟನೆ ಸಂಬಂಧ ಕೆಂಗೇರಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.