newsics.com
ಹಾಸನ: ಸುಪ್ರಸಿದ್ದ ಹಾಸನಾದ ಹಾಸನಾಂಬೆ ದೇವಿಯ ದರ್ಶನಕ್ಕೆ ಇಂದು ವಿದ್ಯುಕ್ತ ತೆರೆ ಬೀಳಲಿದೆ. ಇಂದು ಮಧ್ಯಾಹ್ನ 12 ಗಂಟೆಗೆ ದೇಗುಲದ ಬಾಗಿಲನ್ನು ಬಂದ್ ಮಾಡಲಾಗುತ್ತದೆ. ಕಳೆದ 10 ದಿನಗಳಿಂದ ನಡೆಯುತ್ತಿದ್ದ ಹಾಸನಾಂಬೆ ಉತ್ಸವ ಇಂದು ಮಧ್ಯಾಹ್ನ 12 ಗಂಟೆಗೆ ದೇಗುಲದ ಬಾಗಿಲು ಮುಚ್ಚಲಿದೆ.
ನಿನ್ನೆ ವೀಕೆಂಡ್ ಜೊತೆಗೆ ಹಬ್ಬದ ರಜೆಯಿದ್ದಿದ್ದರಿಂದ ಭಕ್ತರ ಸಂಖ್ಯೆ ಹೆಚ್ಚಾಗಿತ್ತು. ಲಕ್ಷಾಂತರ ಭಕ್ತರು ಸರತಿ ಸಾಲಿನಲ್ಲಿ ನಿಂತು ಅಧಿ ದೇವತೆಯ ದರ್ಶನ ಪಡೆದು ಪುನೀತರಾದ್ರು. ಒಟ್ಟು ದಿನಗಳಲ್ಲಿ 18 ಲಕ್ಷಕ್ಕೂ ಹೆಚ್ಚು ಭಕ್ತರು ಹಾಸನಾಂಬೆ ದೇವಿ ದರ್ಶನ ಪಡೆದಿದ್ದಾರೆ.
1,000, 300 ರೂ. ವಿಶೇಷ ದರ್ಶನದ ಟಿಕೆಟ್‌ಗಳು, ಲಾಡು ಮಾರಾಟ ಹಾಗೂ ದೇವರ ಸೀರೆ ಮಾರಾಟದಿಂದ 8 ಕೋಟಿಗೂ ಹೆಚ್ಚು ಆದಾಯ ಸಂಗ್ರಹವಾಗಿದೆ. ಹಾಸನಾಂಬೆ ಇತಿಹಾಸದಲ್ಲೇ ಈ ಬಾರಿ ಹಲವು ದಾಖಲೆಗಳು ನಿರ್ಮಾಣವಾಗಿವೆ. ಇದೇ ಮೊದಲ ಬಾರಿಗೆ ಅತಿ ಹೆಚ್ಚು ಸಂಖ್ಯೆಯ ಭಕ್ತರಿಂದ ದೇವಿ ದರ್ಶನ ಹಾಗೂ ಅತಿ ಹೆಚ್ಚು ಆದಾಯ ಗಳಿಸುವ ಮೂಲಕ ಹೊಸ ದಾಖಲೆ ಬರೆದಿದೆ.
ಅಕ್ಟೋಬರ್ 24 ರಿಂದ ಆರಂಭಗೊಂಡಿದ್ದ ಹಾಸನಾಂಬೆ ದೇವಿ ಜಾತ್ರಾ ಮಹೋತ್ಸವ ಅದ್ದೂರಿ ಮತ್ತು ವಿಜೃಂಭಣೆಯಿಂದ ಜರುಗಿದ್ದು, ಹೊರ ರಾಜ್ಯ, ಹೊರ ಜಿಲ್ಲೆಗಳಿಂದ ಲಕ್ಷಾಂತರ ಭಕ್ತರು ಆಗಮಿಸಿ ದೇವಿ ದರ್ಶನ ಪಡೆದಿದ್ದಾರೆ. ಇವತ್ತು ಮಧ್ಯಾಹ್ನ 12 ಗಂಟೆ ನಂತರ ಈ ಬಾರಿಯ ಜಾತ್ರಾ ಮಹೋತ್ಸವಕ್ಕೆ ತೆರೆ ಬೀಳಲಿದೆ.